ಉತ್ತರ ಪ್ರದೇಶ: ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ, ಭಾರಿ ಸ್ಫೋಟ
ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಭಾರಿ ಸ್ಫೋಟ ಸಂಭವಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ಉತ್ತರ ಪ್ರದೇಶದ ಗೊಂಡಾದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿತ್ತು. ಎಲ್‌ಪಿಜಿ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್ ಲಕ್ನೋದಿಂದ ಗೊಂಡಾಗೆ ಬರುತ್ತಿದ್ದಾಗ ಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಪ್ರಮುಖ ಲಕ್ನೋ-ಗೊಂಡಾ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಚಾಲಕ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ದೃಶ್ಯಗಳು ಒಂದರ ನಂತರ ಒಂದರಂತೆ ಅನೇಕ ಸಿಲಿಂಡರ್‌ಗಳು ಸ್ಫೋಟಗೊಳ್ಳುವುದು ಕಂಡುಬಂದಿದೆ, ಇದು ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತು. ಬೆಂಕಿ ನಂದಿಸಲು ಪ್ರಯತ್ನ ನಡೆಸಲಾಯಿತು.
ಏತನ್ಮಧ್ಯೆ, ಯಾವುದೇ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಾಹನಗಳನ್ನು ಘಟನಾ ಸ್ಥಳದಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಲ್ಲಿಸಲಾಯಿತು.
ಮತ್ತಷ್ಟು ಓದಿ: ದೆಹಲಿಯಲ್ಲಿ ಅಗ್ನಿ ದುರಂತ: ಐವರು ಸಜೀವದಹನ, 7 ಜನರಿಗೆ ಗಂಭೀರ ಗಾಯ
ದೆಹಲಿಯಲ್ಲಿ ಮನೆಗೆ ಬೆಂಕಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಅಗ್ನಿ (fire) ದುರಂತ ಸಂಭವಿಸಿದ್ದು, ಐವರು ಸಜೀವದಹನವಾಗಿರುವಂತಹ ಘಟನೆ ಪಿತಾಂಪುರಿಯಲ್ಲಿ ಮನೆಯೊಂದರಲ್ಲಿ ನಡೆದಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಹುಡುಕಾಟ ಮುಂದುವರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದು, ಆದರೆ ಕಟ್ಟಡದಲ್ಲಿ ಸಾಕಷ್ಟು ಹೊಗೆ ತುಂಬಿಕೊಂಡಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ