AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಕಾರಿನ ಮೇಲೆ ಮಗುಚಿಬಿದ್ದ ಟ್ರಕ್​, ಇಬ್ಬರು ಮಕ್ಕಳು ಸೇರಿ 5 ಮಂದಿ ಸ್ಥಳದಲ್ಲೇ ಸಾವು

ರಾಯ್ ಬರೇಲಿ-ಪ್ರಯಾಗರಾಜ್ ಹೆದ್ದಾರಿಯಲ್ಲಿ ಕಾರಿನ ಮೇಲೆ ಟ್ರಕ್ ಪಲ್ಟಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಯುಪಿ ಪೊಲೀಸರು ಇಂದು ತಿಳಿಸಿದ್ದಾರೆ.

Uttar Pradesh: ಕಾರಿನ ಮೇಲೆ ಮಗುಚಿಬಿದ್ದ ಟ್ರಕ್​, ಇಬ್ಬರು ಮಕ್ಕಳು ಸೇರಿ 5 ಮಂದಿ ಸ್ಥಳದಲ್ಲೇ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 20, 2022 | 5:28 PM

Share

ರಾಯ್ ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿ-ಪ್ರಯಾಗರಾಜ್ ಹೆದ್ದಾರಿಯಲ್ಲಿ ಕಾರಿನ ಮೇಲೆ ಟ್ರಕ್ ಪಲ್ಟಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಯುಪಿ ಪೊಲೀಸರು ಇಂದು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಎರಡು ಕುಟುಂಬಗಳ ಎಂಟು ಸದಸ್ಯರು ರಾತ್ರಿ ಊಟ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಟ್ರಕ್ ಅಡಿಯಿಂದ  ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.

ರಾಕೇಶ್ (45), ಅವರ ಪತ್ನಿ ಸೋನಂ (35), ರುಚಿತಾ (35) ಮತ್ತು ಅವರ ಮಕ್ಕಳಾದ ರೆಯಾನ್ಶ್ (6) ಮತ್ತು ರೈಸಾ (9) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರಾಕೇಶ್ ಅವರ ಮಕ್ಕಳಾದ ಆದಿತ್ಯ ಮತ್ತು ತನ್ಶಿ ಹಾಗೂ ರುಚಿತಾ ಅವರ ಪತಿ ರಚಿತ್ ಅಗರ್ವಾಲ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ಮತ್ತು ಸರ್ಕಲ್ ಆಫೀಸರ್ (ನಗರ) ವಂದನಾ ಸಿಂಗ್ ತಡರಾತ್ರಿ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಚಾಲಕನನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಎಂಎಸ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ
Image
One Day Trip:ಒತ್ತಡ ಬದಿಗಿಟ್ಟು, ಬೆಂಗಳೂರಿನಿಂದ ಈ ಸ್ಥಳಗಳಿಗೆ ಒಂದು ದಿನದ ಟ್ರಿಪ್​ ಹೋಗಿ
Image
World Milk Day 2022: ಹಾಲಿನ ಸೇವನೆಯಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಹೇಗೆ ಇಲ್ಲಿದೆ ಓದಿ
Image
World No Tobacco Day 2022: ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ; ವಿಶ್ವ ಧೂಮಪಾನ ರಹಿತ ದಿನವನ್ನು ಏಕೆ ಆಚರಿಸುತ್ತಾರೆ ಇಲ್ಲಿದೆ ಓದಿ
Image
Travel: ಬೇಸಿಗೆ ರಜೆಯಲ್ಲಿ ಅಗ್ಗದ ಕುಟುಂಬ ಪ್ರವಾಸ ಮಾಡಲು ಈ ಸ್ಥಳಗಳಿಗೆ ಭೇಟಿ ನೀಡಿ..!

Published On - 5:26 pm, Wed, 20 July 22

Follow Us
TV9 Web
TV9 Web

TV9 Kannada

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?