
ರಾಯ್ ಬರೇಲಿ: ಉತ್ತರ ಪ್ರದೇಶದ ರಾಯ್ ಬರೇಲಿ-ಪ್ರಯಾಗರಾಜ್ ಹೆದ್ದಾರಿಯಲ್ಲಿ ಕಾರಿನ ಮೇಲೆ ಟ್ರಕ್ ಪಲ್ಟಿಯಾದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಯುಪಿ ಪೊಲೀಸರು ಇಂದು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಎರಡು ಕುಟುಂಬಗಳ ಎಂಟು ಸದಸ್ಯರು ರಾತ್ರಿ ಊಟ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಟ್ರಕ್ ಅಡಿಯಿಂದ ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು.
ರಾಕೇಶ್ (45), ಅವರ ಪತ್ನಿ ಸೋನಂ (35), ರುಚಿತಾ (35) ಮತ್ತು ಅವರ ಮಕ್ಕಳಾದ ರೆಯಾನ್ಶ್ (6) ಮತ್ತು ರೈಸಾ (9) ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ರಾಕೇಶ್ ಅವರ ಮಕ್ಕಳಾದ ಆದಿತ್ಯ ಮತ್ತು ತನ್ಶಿ ಹಾಗೂ ರುಚಿತಾ ಅವರ ಪತಿ ರಚಿತ್ ಅಗರ್ವಾಲ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಅಲೋಕ್ ಪ್ರಿಯದರ್ಶಿ ಮತ್ತು ಸರ್ಕಲ್ ಆಫೀಸರ್ (ನಗರ) ವಂದನಾ ಸಿಂಗ್ ತಡರಾತ್ರಿ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟ್ರಕ್ ಚಾಲಕನನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಎಂಎಸ್ ಸಿಂಗ್ ಹೇಳಿದ್ದಾರೆ.
Published On - 5:26 pm, Wed, 20 July 22