ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಭಾನುವಾರ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಮಾರುಕಟ್ಟೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 19 ಕಾರ್ಮಿಕರನ್ನು ಹೊರತೆಗೆಯಲಾಯಿತು, ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ಪ್ರಕಾರ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮಾರುಕಟ್ಟೆ ಮಾಲೀಕ ಹಾಗೂ ಗುತ್ತಿಗೆದಾರರನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯನ್ನು ಗಮನಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡ ಕಾರ್ಮಿಕರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.
ಮತ್ತಷ್ಟು ಓದಿ: ಮಹಾರಾಷ್ಟ್ರ: ಎರಡು ಅಂತಸ್ತಿನ ಕಟ್ಟಡ ಕುಸಿತ, ನವಜಾತ ಶಿಶು ಸೇರಿ ಇಬ್ಬರು ಸಾವು
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಅಪಘಾತದ ಬಗ್ಗೆ ಗಮನಹರಿಸಿದ್ದಾರೆ . ಪರಿಹಾರ ಕಾರ್ಯವನ್ನು ಚುರುಕುಗೊಳಿಸುವಂತೆ ಅವರು ಅಧಿಕಾರಿಗಳು ಮತ್ತು ರಕ್ಷಣಾ ತಂಡಕ್ಕೆ ಸೂಚನೆ ನೀಡಿದ್ದಾರೆ. ಇದಲ್ಲದೇ ವೈದ್ಯರ ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.
ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಸಾವು, ಹಲವರಿಗೆ ಗಾಯ
ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ 2 ಮಂದಿ ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಭಾನುವಾರ ತಡರಾತ್ರಿ ಕೋಲ್ಕತ್ತಾದಲ್ಲಿ ಈ ದುರ್ಘಟನೆ ನಡೆದಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಮಧ್ಯರಾತ್ರಿಯ ಸುಮಾರಿಗೆ ಐದು ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ