ಉತ್ತರ ಪ್ರದೇಶ​: ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಫೋಟ, ಇಬ್ಬರು ಸಾವು

ಉತ್ತರ ಪ್ರದೇಶದ ಮೀರತ್‌ನಲ್ಲಿ ಟೈರ್ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಭಾರಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ತಂಡ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ​: ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಫೋಟ, ಇಬ್ಬರು ಸಾವು
ಬಾಯ್ಲರ್ ಸ್ಫೋಟImage Credit source: Jan Manthan
Follow us
ನಯನಾ ರಾಜೀವ್
|

Updated on: Feb 27, 2024 | 11:02 AM

ಉತ್ತರ ಪ್ರದೇಶದ ಮೀರತ್​ನ ಟೈರ್​ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್​ ಸ್ಪೋಟ(Boiler Blast)ದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೀರತ್‌ನ ಇಂಚೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ವನ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಟೈರ್ ಕರಗಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದು ಹಲವು ಪೊಲೀಸ್ ಠಾಣೆಗಳಿಂದ ಪಡೆಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಲಾಗಿದೆ. ಸ್ಥಳಕ್ಕಾಗಮಿಸಿದ ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಸಿಂಗ್, ದುರ್ಗಾ ಟೈರ್ಸ್ ಹೆಸರಿನಲ್ಲಿ ಟೈರ್ ಕರಗಿಸುವ ಕಾರ್ಖಾನೆ ಇದೆ. ಬೆಳಗ್ಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

6.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ, ಈ ಕಾರ್ಖಾನೆಯು ಇಲ್ಲಿನ ನಿವಾಸಿಯಾಗಿರುವ ಅಮಿತ್ ಠಾಕೂರ್ ಅವರಿಗೆ ಸೇರಿದ್ದು ಎನ್ನಲಾಗಿದೆ. ಸ್ಥಳದಲ್ಲಿ ಪೊಲೀಸರಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಮೀರತ್ ಗಂಗಾನಗರದ ದಿವ್ಯಜ್ಯೋತಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ. ಚಿಕಿತ್ಸೆ ಎಲ್ಲಿ ನಡೆಯುತ್ತಿದೆ. ಉಳಿದಂತೆ ಬಾಯ್ಲರ್ ಸ್ಫೋಟಗೊಳ್ಳಲು ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಅಪಘಾತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಇದಕ್ಕಾಗಿ ವಿಧಿವಿಜ್ಞಾನ ತಂಡ ಮತ್ತು ಇತರ ತನಿಖಾ ತಂಡಗಳು ಕೂಡ ಸ್ಥಳಕ್ಕೆ ತಲುಪುತ್ತಿವೆ. ಎಸ್ಪಿ ದೇಹತ್ ಕಮಲೇಶ್ ಬಹದ್ದೂರ್ ಅವರು ಈ ಸಂಪೂರ್ಣ ಘಟನೆಯ ಮೇಲೆ ನಿಗಾ ವಹಿಸಿದ್ದಾರೆ. ಕಾರ್ಖಾನೆಯಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಹೆಚ್ಚಿನ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ