ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ನಗರ ಕೊತ್ವಾಲಿಯ ನಿಜಾಂಪುರ್ ಪ್ರದೇಶದ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಇರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನಿಡಿದ್ದರು.

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ಪತ್ತೆ
ಸೂಟ್​ಕೇಸ್​Image Credit source: NDTV
Follow us
ನಯನಾ ರಾಜೀವ್
|

Updated on: Nov 17, 2024 | 10:38 AM

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ದೆಹಲಿ-ಲಕ್ನೋ ಹೆದ್ದಾರಿಯಲ್ಲಿ ಬಿದ್ದಿದ್ದ ಸೂಟ್​ಕೇಸ್​ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ನಗರ ಕೊತ್ವಾಲಿಯ ನಿಜಾಂಪುರ್ ಪ್ರದೇಶದ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರು ಸೂಟ್‌ಕೇಸ್ ಇರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನಿಡಿದ್ದರು.

ಪೊಲೀಸರು ಸೂಟ್‌ಕೇಸ್‌ ಅನ್ನು ಬಿಚ್ಚಿದಾಗ ದೇಹದ ಮೇಲೆಲ್ಲ ಗಾಯದ ಗುರುತುಗಳಿದ್ದವು. ಮಹಿಳೆಯ ಗುರುತು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ, ಆಕೆ 25 ರಿಂದ 30 ವರ್ಷ ವಯಸ್ಸಿನವಳು ಎಂದು ಅಂದಾಜಿಸಲಾಗಿದೆ.

ಮಾಹಿತಿ ಪಡೆದ ಪೊಲೀಸರು, ವಿಧಿವಿಜ್ಞಾನ ತಜ್ಞರೊಂದಿಗೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ತನಿಖಾಧಿಕಾರಿಗಳು ತಮ್ಮ ಪರೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆ ಸೂಟ್‌ಕೇಸ್ ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿಯಲಾಯಿತು. ಮಹಿಳೆಯ ಶವದ ಜೊತೆಗೆ ಸೂಟ್‌ಕೇಸ್‌ನಲ್ಲಿ ಕೆಲವು ಬಟ್ಟೆಗಳು ಸಹ ಇದ್ದವು.

ಮಹಿಳೆಯ ಮೇಲಿನ ಗಾಯಗಳು ಆಕೆಯ ದೇಹವನ್ನು ಪತ್ತೆಹಚ್ಚುವ ಸುಮಾರು ಒಂದು ದಿನದ ಮೊದಲು ಅವಳು ಸತ್ತಿರಬಹುದು ಎಂದು ಸೂಚಿಸುತ್ತದೆ. ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಮಹಿಳೆಯನ್ನು ಕಟ್ಟಿಹಾಕಿ, ಆಕೆಯ ಮುಂದೆಯೇ ಪತಿ ಕತ್ತು ಸೀಳಿ ಹತ್ಯೆ ಉತ್ತರ ಪ್ರದೇಶದ ಇಟಾವಾದಲ್ಲಿ ಕೊಲೆಯಾದ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಪತ್ನಿಯನ್ನು ಕಟ್ಟಿ ಹಾಕಿದ್ದಾರೆ. ಇದಾದ ಬಳಿಕ ಆಕೆಯ ಎದುರೇ ಹರಿತವಾದ ಆಯುಧದಿಂದ ಪತಿಯ ಕತ್ತು ಸೀಳಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಮೃತರನ್ನು ಮನೋಜ್ ಜಾತವ್ (45) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ಅಪರಿಚಿತ ಜನರು ಗಪ್ಚಿಯಾ ಗ್ರಾಮದಲ್ಲಿರುವ ಅವರ ಮನೆಗೆ ಪ್ರವೇಶಿಸಿದ್ದಾರೆ. ದಾಳಿಕೋರರು ಮೊದಲು ಮಹಿಳೆಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು. ಮಹಿಳೆಯನ್ನು ಕಟ್ಟಿಹಾಕಿದ ನಂತರ ದುಷ್ಕರ್ಮಿಗಳು ಮನೋಜ್ ಜಾತವ್ ಅವರ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಸೀಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್