ಉನ್ನಾವೋದಲ್ಲಿ ಕೋರ್ಟ್ನತ್ತ ಹೊರಟಿದ್ದ ಸಂತ್ರಸ್ತೆಯ ಕೊಲೆಗೆ ಯತ್ನಿಸಿದ ರೇಪ್ ಆರೋಪಿಗಳು
ಲಕ್ನೋ: ಉನ್ನಾವೋದಲ್ಲಿ ನಡೆದ ಗ್ಯಾಂಗ್ ರೇಪ್ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ಹೊರಟಿದ್ದ ಸಂತ್ರಸ್ತೆಯನ್ನು ದಾರಿ ಮಧ್ಯೆದಲ್ಲಿಯೇ ಆರೋಪಿಗಳು ಕೊಲೆಗೆ ಯತ್ನಿಸಿದ್ದಾರೆ. ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತೆ ಸಾವು ಬದುಕಿನ ನಡುವೆ […]
ಲಕ್ನೋ: ಉನ್ನಾವೋದಲ್ಲಿ ನಡೆದ ಗ್ಯಾಂಗ್ ರೇಪ್ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು.
ಈ ವಿಚಾರಕ್ಕೆ ಸಂಬಂಧಿಸಿ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ಹೊರಟಿದ್ದ ಸಂತ್ರಸ್ತೆಯನ್ನು ದಾರಿ ಮಧ್ಯೆದಲ್ಲಿಯೇ ಆರೋಪಿಗಳು ಕೊಲೆಗೆ ಯತ್ನಿಸಿದ್ದಾರೆ. ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರು ಆರೋಪಿಗಳ ಬಂಧನವಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ.
Published On - 11:52 am, Thu, 5 December 19