ಉನ್ನಾವೋದಲ್ಲಿ ಕೋರ್ಟ್​ನತ್ತ ಹೊರಟಿದ್ದ ಸಂತ್ರಸ್ತೆಯ ಕೊಲೆಗೆ ಯತ್ನಿಸಿದ ರೇಪ್ ಆರೋಪಿಗಳು

ಲಕ್ನೋ: ಉನ್ನಾವೋದಲ್ಲಿ ನಡೆದ ಗ್ಯಾಂಗ್‌ ರೇಪ್ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ ರೇಪ್ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ಹೊರಟಿದ್ದ ಸಂತ್ರಸ್ತೆಯನ್ನು ದಾರಿ ಮಧ್ಯೆದಲ್ಲಿಯೇ ಆರೋಪಿಗಳು ಕೊಲೆಗೆ ಯತ್ನಿಸಿದ್ದಾರೆ. ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತೆ ಸಾವು ಬದುಕಿನ ನಡುವೆ […]

ಉನ್ನಾವೋದಲ್ಲಿ ಕೋರ್ಟ್​ನತ್ತ ಹೊರಟಿದ್ದ ಸಂತ್ರಸ್ತೆಯ ಕೊಲೆಗೆ ಯತ್ನಿಸಿದ ರೇಪ್ ಆರೋಪಿಗಳು
Edited By:

Updated on: Dec 05, 2019 | 4:39 PM

ಲಕ್ನೋ: ಉನ್ನಾವೋದಲ್ಲಿ ನಡೆದ ಗ್ಯಾಂಗ್‌ ರೇಪ್ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಲಾಗಿದೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳು ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಪ್ರಯತ್ನ ಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ ರೇಪ್ ನಡೆದಿತ್ತು.

ಈ ವಿಚಾರಕ್ಕೆ ಸಂಬಂಧಿಸಿ ರಾಯ್‌ಬರೇಲಿ ಕೋರ್ಟ್‌ನಲ್ಲಿ ಇಂದು ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ಹೊರಟಿದ್ದ ಸಂತ್ರಸ್ತೆಯನ್ನು ದಾರಿ ಮಧ್ಯೆದಲ್ಲಿಯೇ ಆರೋಪಿಗಳು ಕೊಲೆಗೆ ಯತ್ನಿಸಿದ್ದಾರೆ. ಸಂತ್ರಸ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸಂತ್ರಸ್ತೆ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರು ಆರೋಪಿಗಳ ಬಂಧನವಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ.

Published On - 11:52 am, Thu, 5 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us