ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೋ ಸಂತ್ರಸ್ತೆ ಇನ್ನಿಲ್ಲ
ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ […]
ದೆಹಲಿ: ಚಿಕಿತ್ಸೆ ಫಲಿಸದೆ ತಡರಾತ್ರಿ ನವದೆಹಲಿಯ ಆಸ್ಪತ್ರೆಯಲ್ಲಿ ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾರೆ. ಡಿಸೆಂಬರ್ 5ರಂದು ಉನ್ನಾವೋ ಸಂತ್ರಸ್ತೆ ಮೇಲೆ ಕೊಲೆ ಯತ್ನ ನಡೆದಿತ್ತು. ಸಂತ್ರಸ್ತೆಯ ಮೇಲೆ ಪೆಟ್ರೋಲ್ ಸುರಿದು ಐವರು ಆರೋಪಿಗಳು ಬೆಂಕಿ ಹಚ್ಚಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ತಡರಾತ್ರಿ 11.40ಕ್ಕೆ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಪ್ರಕರಣ ಸಂಬಂಧ ರಾಯ್‌ಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ಇತ್ತು. ಹೀಗಾಗಿ ರಾಯ್‌ಬರೇಲಿಗೆ ತೆರಳ್ತಿದ್ದಾಗ ಪ್ರಕರಣದ ಆರೋಪಿಗಳು ಸಜೀವ ದಹನಕ್ಕೆ ಯತ್ನಿಸಿದ್ರು. ಸಂತ್ರಸ್ತೆಯನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಶೇಕಡಾ 90ರಷ್ಟು ಸುಟ್ಟ ಗಾಯಗಳಿಂದ ಬಳಲ್ತಿದ್ದ ಸಂತ್ರಸ್ತೆಯನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಂತ್ರಸ್ತೆ ಸಾವನ್ನಪ್ಪಿದ್ದಾರೆ.
Published On - 6:38 am, Sat, 7 December 19