Uttar Pradesh: ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
ಚುಡಾಯಿಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ನಿರಂತರ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಫತೇಪುರ್ನಲ್ಲಿ ನಡೆದಿದೆ. ಹುಸೇನಗುಂಜ್‌ನಲ್ಲಿ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಯುವತಿಗೆ ಇಬ್ಬರು ಹುಡುಗರು ಕಿರುಕುಳ ನೀಡುತ್ತಿದ್ದರು ಅದನ್ನು ಸಹಿಸಿಕೊಳ್ಳಲಾಗದೆ ಆತ್ಮಹತ್ಯೆಯ ದಾರಿ ತುಳಿದಿದ್ದಾಳೆ. ಆಕೆ ತನ್ನ ಮನೆಗೆ ಹೋಗುತ್ತಿದ್ದಾಗ ಇಬ್ಬರು ಕಿರುಕುಳ ನೀಡಿದ್ದಾರೆ, ಘಟನೆಯಿಂದ ಮನನೊಂದ ಆಕೆ ತನ್ನ ಮನೆಯಲ್ಲಿ ಬೆಂಕಿ ಹಚ್ಚಿಕೊಂಡಿದ್ದಾಳೆ.
ಕೊನೆಯುಸಿರೆಳೆದುಕೊಳ್ಳುವ ಮೊದಲು ಆಕೆ ತನ್ನ ತಾಯಿಗೆ ಕಿರುಕುಳ ನೀಡಿದ ಇಬ್ಬರ ಹೆಸರನ್ನು ಹೇಳಿದ್ದಾಳೆ ಎಂದು ತಿಳಿಸಿದ್ದಾರೆ. ನೆರೆಹೊರೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ವಿಧಿವಿಜ್ಞಾನ ತಂಡವನ್ನು ಕರೆಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಶಂಕರ್ ಮಿಶ್ರಾ ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸುವವರೆಗೆ ಆಕೆಯ ಮರಣೋತ್ತರ ಪರೀಕ್ಷೆ ನಡೆಸಬಾರದು ಎಂದು ಸಂತ್ರಸ್ತೆಯ ಕುಟುಂಬದವರು ಒತ್ತಾಯಿಸಿದ್ದಾರೆ. ಯುವತಿ ತಂದೆ ತೋರಿಕೊಂಡಿದ್ದರು, ಆಕೆಯ ಸಹೋದರ ಹಾಗೂ ತಾಯಿ ಹಾಲು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು. ಆಕೆ ಕಾಲೇಜನ್ನು ಬಿಟ್ಟು ಮನೆಯಲ್ಲೇ ಸಹಾಯ ಮಾಡಿಕೊಂಡಿದ್ದಳು.
ಮತ್ತಷ್ಟು ಓದಿ:ಹಾಸನ: ಪತ್ನಿ ಕೊಂದು ಪತಿ ಆತ್ಮಹತ್ಯೆ ಶಂಕೆ; ಮನೆಯ ಬಾಗಿಲು ಮುರಿದು ನೋಡಿದಾಗ ಘಟನೆ ಬೆಳಕಿಗೆ
ಜಾನುವಾರುಗಳನ್ನು ಸಾಕಲಾಗುತ್ತದೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಜಾನುವಾರುಗಳಿಗೆ ಮೇವು ಮತ್ತು ನೀರು ಕೊಡಲು ಹೋಗಿದ್ದರು. ಮಗಳಿಗೂ ಬರುವಂತೆ ಹೇಳಿದರೂ ಬಂದಿರಲಿಲ್ಲ.
11 ಗಂಟೆ ಸುಮಾರಿಗೆ ಮನೆ ತಲುಪಿದಳು. ಮೊದಲ ಮಹಡಿಯ ಕೊಠಡಿಯಲ್ಲಿ ಮಗಳು ಸುಟ್ಟ ಸ್ಥಿತಿಯಲ್ಲಿದ್ದಳು. ಆರೋಪಿಯು ಈ ಹಿಂದೆಯೂ ಹಲವು ಬಾರಿ ತನ್ನ ಮಗಳಿಗೆ ಕಿರುಕುಳ ನೀಡಿದ್ದ ಎಂದು ತಾಯಿ ಆರೋಪಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:49 am, Sun, 17 March 24