AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಥಿಗಳ ನಡುವೆ ಕೂಲರ್​​ಗಾಗಿ ಜಗಳ; ಸಾವಿನ ಮನೆಯಾದ ಮದುವೆಮನೆ

ಉತ್ತರ ಪ್ರದೇಶದ ಅಜಮ್‌ಗಢದಲ್ಲಿ ಕೂಲರ್ ಗಾಳಿ ತನಗೆ ಸರಿಯಾಗಿ ಬರುತ್ತಿಲ್ಲ ಎಂದು ಗಲಾಟೆ ನಡೆದಿದೆ. ಈ ವಿವಾದದ ನಂತರ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅಜಮ್‌ಗಢದಲ್ಲಿ ನಡೆದ ಮದುವೆಯೊಂದರಲ್ಲಿ ಕೂಲರ್ ಗಾಳಿಗಾಗಿ ಜಗಳ ನಡೆದಿದೆ. ಮದುವೆಯಲ್ಲಿ ವರ ಮತ್ತು ವಧುವಿನ ಕಡೆಯ ಅತಿಥಿಗಳ ನಡುವೆ ಜಗಳ ನಡೆದಿದೆ ಎಂದು ವರದಿಯಾಗಿದೆ. ಕೂಲರ್ ಬಗ್ಗೆ ಎರಡೂ ಕಡೆಯವರು ಜಗಳವಾಡಲು ಪ್ರಾರಂಭಿಸಿದರು. ಅದಾದ ಕೆಲವೇ ನಿಮಿಷಗಳಲ್ಲಿ ಪರಿಸ್ಥಿತಿ ಅಸ್ತವ್ಯಸ್ತವಾಯಿತು.

ಅತಿಥಿಗಳ ನಡುವೆ ಕೂಲರ್​​ಗಾಗಿ ಜಗಳ; ಸಾವಿನ ಮನೆಯಾದ ಮದುವೆಮನೆ
Cooler
ಸುಷ್ಮಾ ಚಕ್ರೆ
|

Updated on: Apr 30, 2026 | 8:29 PM

Share

ನವದೆಹಲಿ, ಏಪ್ರಿಲ್ 30: ಉತ್ತರ ಪ್ರದೇಶದ (Uttar Pradesh) ಅಜಮ್‌ಗಢದಲ್ಲಿ ಮದುವೆಯೊಂದು ದುರಂತವಾಗಿ ಬದಲಾಗಿದೆ. ಮದುವೆಯ ಪಾರ್ಟಿಯಲ್ಲಿ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಜಿಯಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ನಗರದ ಪ್ರದೇಶದಲ್ಲಿ ಮದುವೆ (Wedding) ನಡೆಯುತ್ತಿತ್ತು. ವಧು-ವರರ ಕುಟುಂಬದ ನಡುವೆ ಕ್ಷುಲ್ಲಕ ವಿಷಯಕ್ಕೆ ವಿವಾದ ಪ್ರಾರಂಭವಾಯಿತು.

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ವರನ ಕಡೆಯ ಕೆಲವರು ಮತ್ತು ವಧುವಿನ ಕಡೆಯ ಕೆಲವರು ಡೆಸರ್ಟ್ ಕೂಲರ್ ತಮ್ಮ ಕಡೆಗೆ ತಿರುಗಬೇಕು ಎಂದು ವಾದ ಮಾಡತೊಡಗಿದರು. ಸೆಖೆ ಜಾಸ್ತಿ ಇದ್ದುದರಿಂದ ತಮ್ಮ ಕಡೆ ಕೂಲರ್ ಇಡಬೇಕೆಂದು ಜಗಳವಾಡಿದರು. ಈ ಜಗಳ ಕ್ರಮೇಣ ತಾರಕಕ್ಕೇರಿತು. 26 ವರ್ಷದ ಅಮೀರ್ ಚಂದ್ರ ಸಹಾನಿ ಎಂಬ ವ್ಯಕ್ತಿ ಘರ್ಷಣೆಯ ಸಮಯದಲ್ಲಿ ಸಾವನ್ನಪ್ಪಿದರು. ಗಂಭೀರವಾಗಿ ಗಾಯಗೊಂಡ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ 4 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಅಜಮ್‌ಗಢ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಘರ್ಷಣೆಯಲ್ಲಿ ಭಾಗಿಯಾಗಿದ್ದ ಕೆಲವು ಜನರನ್ನು ಅವರು ಬಂಧಿಸಿದ್ದಾರೆ. ಮೃತರ ತಂದೆ ಕೂಡ ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯದಲ್ಲಿ ತನಿಖೆ ನಡೆಯುತ್ತಿದೆ. ಆ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಘರ್ಷಣೆ ನಡೆದ ಪ್ರದೇಶದಲ್ಲಿ ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಮದುವೆಯ ಡಿಜೆ ಸೌಂಡ್​​ನಿಂದ 140 ಕೋಳಿಗಳಿಗೆ ಹೃದಯಾಘಾತ!

ಅಮೀರ್ ಚಂದ್ರ ಸಹಾನಿ ಸ್ಥಳದಲ್ಲೇ ಸಾವನ್ನಪ್ಪಿದರೆ, ವರನ ಕಡೆಯವರಾದ ರಾಜ್‌ಕುಮಾರ್ ಸಹಾನಿ, ಅಭಿಲಾಷ್ ಸಹಾನಿ ಮತ್ತು ಸಾಹಿಲ್ ಯಾದವ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us