ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಹಾಗೂ ಐದು ವರ್ಷದ ಮಗನ ಶವ ಪತ್ತೆಯಾಗಿದೆ. ಈ ಘಟನೆ ಉತ್ತರಪ್ರದೇಶದ ಮಹಾರಾಜ್ಗಂಜ್ನಲ್ಲಿ ನಡೆದಿದೆ. ವಂದನಾ ಮತ್ತು ಆಕೆಯ ಮಗ ಚಿಂಟು ಸದರ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಜನಾಥಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಆತಿಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಮಹಿಳೆಯ ಪತಿ ಶೇಷಮಣಿ ರಾಜ್‌ಭರ್ ಅವರು ಆಗಾಗ ಜಗಳವಾಡುತ್ತಿದ್ದರು ಮತ್ತು ಘಟನೆಯ ಮೊದಲು ಕೂಡ ಜಗಳವಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಎಎಸ್‌ಪಿ ತಿಳಿಸಿದ್ದಾರೆ.
ಹಾಸ್ಟೆಲ್ನಲ್ಲಿ ಕಾಲೇಜು ವಿದ್ಯಾರ್ಥಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಬಿಎ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತೀರ್ಥಂಕರ ಮಹಾವೀರ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ