ಉತ್ತರ ಪ್ರದೇಶ: ತಾಯಿ, ಮಗಳು ಶವವಾಗಿ ಪತ್ತೆ, ದರೋಡೆ ಶಂಕೆ

ಮನೆಯಲ್ಲಿ ತಾಯಿ,ಮಗಳು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ದರೋಡೆ ಯತ್ನದ ಸಂದರ್ಭದಲ್ಲಿ ಅವರನ್ನು ಹತ್ಯೆಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಉತ್ತರ ಪ್ರದೇಶ: ತಾಯಿ, ಮಗಳು ಶವವಾಗಿ ಪತ್ತೆ, ದರೋಡೆ ಶಂಕೆ
ಪೊಲೀಸ್​
Follow us
ನಯನಾ ರಾಜೀವ್
|

Updated on: Sep 29, 2024 | 8:33 AM

ಮನೆಯಲ್ಲಿ ತಾಯಿ,ಮಗಳು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ದರೋಡೆ ಯತ್ನದ ಸಂದರ್ಭದಲ್ಲಿ ಅವರನ್ನು ಹತ್ಯೆಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹತ್ಯೆಗೀಡಾದವರನ್ನು ಹಾಪುರದ ಖಿಚಾರ ಗ್ರಾಮದ ಕೌಸರ್ ಜಹಾನ್ (60) ಮತ್ತು ಖುಷ್ಬೂ (25) ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಬಾಗಿಲು ಒಡೆದು ನೋಡಿದಾಗ ಒಳಗಿದ್ದ ಶವಗಳು ಪತ್ತೆಯಾಗಿವೆ.

ಹಾಪುರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿನೀತ್ ಭಟ್ನಾಗರ್ ಅವರು ನಾಲ್ಕೈದು ದಿನಗಳ ಹಿಂದೆ ಕತ್ತು ಹಿಸುಕಿ ಇಬ್ಬರನ್ನೂ ಕೊಂದಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಕೌಸರ್ ಅವರ ಪತಿ ತೀರಿಕೊಂಡಿದ್ದು, ಕೌಸರ್ ಮತ್ತು ಖುಷ್ಬೂ ಮಾತ್ರ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

500 ರೂ. ಕದ್ದನೆಂಬ ಅನುಮಾನದಿಂದ 10 ವರ್ಷದ ಮಗನಿಗೆ ಹೊಡೆದು ಕೊಂದ ತಂದೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ತಂದೆಯೊಬ್ಬ ತನ್ನ 10 ವರ್ಷದ ಮಗನನ್ನು ಹೊಡೆದು ಕೊಂದಿದ್ದಾನೆ. ತಂದೆಯೇ ಮಗನನ್ನು ಕೊಲೆ ಮಾಡಿದ್ದಾನೆ. ಈ ಕೊಲೆಗೆ ಅನುಮಾನವೇ ಕಾರಣ. ತನ್ನ ಬಳಿಯಿದ್ದ 500 ರೂ.ಗಳನ್ನು ಮಗ ಕದ್ದಿದ್ದಾನೆ ಎಂದು ತಂದೆ ಶಂಕಿಸಿದ್ದಾರೆ. ಈ ಅನುಮಾನದ ಆಧಾರದ ಮೇಲೆ ತಂದೆ ಮಗನಿಗೆ ಬೆಲ್ಟ್ ಮತ್ತು ಕಿಚನ್ ರೋಲಿಂಗ್ ಪಿನ್ ನಿಂದ ಹೊಡೆದು ಕೊಂದಿದ್ದಾನೆ.

ಈ ಹತ್ಯೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಅಪರಾಧಕ್ಕೆ ಬಳಸಿದ ರೋಲಿಂಗ್ ಪಿನ್ ಅನ್ನು ವಶಪಡಿಸಿಕೊಂಡರು. ಮಗುವಿನ ದೇಹವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಗುವಿನ ಸಾವಿನಿಂದ ಇಡೀ ಕುಟುಂಬವು ದುಃಖಿತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?