ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆರೋಪಿಗಳನ್ನು ಶಂಕಿ, ರಾಬಿನ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳು ಮಹಿಳೆ (24) ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಕೊಳವೆ ಬಾವಿ ಕಾಂಪೌಂಡ್ ಬಳಿ ಅತ್ಯಾಚಾರವೆಸಗಿದ ಘಟನೆ ಶುಕ್ರವಾರ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜೀವ್ ವಾಜಪೇಯಿ ತಿಳಿಸಿದ್ದಾರೆ.
ತನ್ನ ದೂರಿನಲ್ಲಿ ಸಂತ್ರಸ್ತೆ ಪೊಲೀಸರ ಬಳಿ ಆರೋಪಿಗಳನ್ನು ತಿಳಿದಿರುವುದಾಗಿ ಹೇಳಿದ್ದಾಗಿ ತಿಳಿಸಿದ್ದಾರೆ. ಶನಿವಾರ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜೀವ್ ವಾಜಪೇಯಿ ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮಲಯಾಳಂ ನಿರ್ದೇಶಕನ ವಿರುದ್ಧ ನಟಿಯಿಂದ ಅತ್ಯಾಚಾರ ಪ್ರಕರಣ ದಾಖಲು
ಮತ್ತೊಂದು ಘಟನೆ
ಪೈಲ್ಸ್ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ರೇಪ್, ಬೆತ್ತಲೆ ಫೋಟೋ ಇಟ್ಕೊಂಡು ಬ್ಲಾಕ್ಮೇಲ್
ಪೈಲ್ಸ್ ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ(Mangaluru) ಎ.ಜೆ.ಆಸ್ಪತ್ರೆಯಲ್ಲಿ ನಡೆದಿದೆ. ಬಳಿಕ ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕೇರಳ ಮೂಲದ ಆರೋಪಿ ಸಜಿತ್ ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇನ್ನು ಆರೋಪಿ, ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಎ.ಜೆ.ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಮಹಾರಾಜ ಹೋಟೆಲ್, ಫಾದರ್ ಮುಲ್ಲರ್ಸ್ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಕೃತ್ಯ ಎಸಗಿದ್ದಾನೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ