Uttar Pradesh: ಆಗ್ರಾದ ಮಸೀದಿ ಆವರಣದಲ್ಲಿ ಮಹಿಳೆಯ ಶವ ಪತ್ತೆ

|

Updated on: May 20, 2024 | 8:25 AM

ಆಗ್ರಾದ ಮಸೀದಿಯೊಂದರ ಆವರಣದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆ ಪ್ರಕರಣದ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಘಟನೆಯ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

Uttar Pradesh: ಆಗ್ರಾದ ಮಸೀದಿ ಆವರಣದಲ್ಲಿ ಮಹಿಳೆಯ ಶವ ಪತ್ತೆ
ಸಾವು
Follow us on

ಉತ್ತರ ಪ್ರದೇಶ(Uttar Pradesh) ದ ಆಗ್ರಾದ ಮಸೀದಿ ಸಂಕೀರ್ಣದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಗರದ ನಾಗ್ಲಾ ಪೈಮಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಪ್ರಕರಣದ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಘಟನೆಯ ತನಿಖೆ ನಡೆಸಿ ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಬಗ್ಗೆ ಪೊಲೀಸರು ಭಾನುವಾರ ಮಾಹಿತಿ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಕೊಲೆ ಎಂದು ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗ್ಲಾ ಪೈಮಾ ಪ್ರದೇಶದ ಮಸೀದಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭಿಸಿದೆ.

ಮತ್ತಷ್ಟು ಓದಿ: Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಡಿಸಿಪಿ ಸಿಟಿ ಆಗ್ರಾ, ಎಸಿಪಿ ಸದಾರ್ ತಾಜ್‌ಗಂಜ್ ಪೊಲೀಸ್ ಠಾಣೆಯೊಂದಿಗೆ ಘಟನಾ ಸ್ಥಳಕ್ಕೆ ತಲುಪಿದರು. ಮೇಲ್ನೋಟಕ್ಕೆ ಇದೊಂದು ಕೊಲೆಯಂತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಹವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ತನಿಖೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ