AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ, ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಯುವಕನೊಬ್ಬ ಪ್ರೇಯಸಿಯ ದುಪಟ್ಟಾವನ್ನು ಕೊರಳಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ದಲಿತ ಸಮುದಾಯದ ಹುಡುಗಿಯೊಂದಿಗೆ ಸಮ್ರೇಜ್ ದೀರ್ಘಕಾಲದ ಸಂಬಂಧದಲ್ಲಿದ್ದ. ಅವರ ಅಂತರ್ಧರ್ಮೀಯ ಸಂಬಂಧವನ್ನು ಎರಡೂ ಕುಟುಂಬಗಳು ನಿರಾಕರಿಸಿದ್ದವು. ಹುಡುಗಿ ಇತ್ತೀಚೆಗೆ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ವಿಷಯ ಉಲ್ಬಣಗೊಂಡಿತ್ತು.

ಬೇರೆ ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ, ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಯುವತಿImage Credit source: The daily Guardian
ನಯನಾ ರಾಜೀವ್
|

Updated on: Apr 09, 2025 | 8:53 AM

Share

ಉತ್ತರ ಪ್ರದೇಶ, ಏಪ್ರಿಲ್ 09: ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುವೆ(Marriage)ಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕುರ್ದಿಖೇಡ ಗ್ರಾಮದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಸಮ್ರೇಜ್ ಎಂದು ಗುರುತಿಸಲಾಗಿದೆ. ಈತ ಹಮೀದ್ ಅಲಿಯಾಸ್ ಭೂರಾ ಎಂಬವರ ಪುತ್ರನಾಗಿದ್ದು, ಈತ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ಸ್ಥಳೀಯ ನಿವಾಸಿಯಾಗಿದ್ದಾನೆ. ಸಮ್ರೇಜ್ ಮೃತದೇಹ ಮರದಲ್ಲಿ ನೇತಾಡುತ್ತಿತ್ತು.

ಈ ಘಟನೆ ಸುತ್ತ ವಿಡಿಯೋವೊಂದು ಹರಿದಾಡಿದ್ದು, ಯುವತಿ ಆತನನ್ನು ತಬ್ಬಿ ಅಳುತ್ತಿರುವುದನ್ನು ಕಾಣಬಹುದು. ದಲಿತ ಸಮುದಾಯದ ಹುಡುಗಿಯೊಂದಿಗೆ ಸಮ್ರೇಜ್ ದೀರ್ಘಕಾಲದ ಸಂಬಂಧದಲ್ಲಿದ್ದ. ಅವರ ಅಂತರ್ಧರ್ಮೀಯ ಸಂಬಂಧವನ್ನು ಎರಡೂ ಕುಟುಂಬಗಳು ನಿರಾಕರಿಸಿದ್ದವು. ಹುಡುಗಿ ಇತ್ತೀಚೆಗೆ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ವಿಷಯ ಉಲ್ಬಣಗೊಂಡಿತ್ತು.

ಇದನ್ನೂ ಓದಿ
Image
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮ ವಿವಾಹ!
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಆಕೆಯಿಂದ ದೂರ ಹೋಗಿರುವುದು ಮತ್ತು ಕುಟುಂಬದ ಒತ್ತಡದಿಂದ ಮನನೊಂದ ಸಮ್ರೇಜ್ ತಡರಾತ್ರಿ ಆಕೆಗೆ ಮನೆಯಿಂದ ಹೊರಬರಲು ಹೇಳಿದ್ದ, ಇಬ್ಬರೂ ಕಾಡಿನ ದಾರಿ ಹಿಡಿದರು. ಇಬ್ಬರೂ ಮಾತನಾಡುತ್ತಿರುವಾಗ ವಾಗ್ವಾದ ತೀವ್ರವಾಗಿ ಕೋಪದಲ್ಲಿ ಆತ ಪ್ರೇಯಸಿಯ ದುಪಟ್ಟಾವನ್ನು ಎಳೆದುಕೊಂಡು ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವನ್ನು ನೋಡಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಮರ್ಯಾದಾ ಹತ್ಯೆ, ಬೇರೆ ಜಾತಿಯವನ ಮದುವೆಯಾಗಿದ್ದಕ್ಕೆ ತಂದೆ, ಅಣ್ಣನಿಂದ ಯುವತಿಯ ಕೊಲೆ

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಮ್ರೇಜ್ ಅವರ ಮೊಬೈಲ್ ಫೋನ್ ಮತ್ತು ಮೋಟಾರ್ ಸೈಕಲ್ ಅನ್ನು ಸ್ಥಳದಿಂದ ವಶಪಡಿಸಿಕೊಂಡರು. ತನಿಖೆಯ ಭಾಗವಾಗಿ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪರಿಸ್ಥಿತಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಹಲವು ಮಂದಿ ಕಾರಣೀಭೂತರಾಗಿದ್ದಾರೆ, ಅವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬುದನ್ನು ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ