AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಹ್ರಾಡೂನ್: ಕಿಡಿಗೇಡಿಯಿಂದ ದೇವಾಲಯದ ಗೇಟ್​ ಮೇಲೆ ಮೂತ್ರ ವಿಸರ್ಜನೆ, ಕಲ್ಲು ತೂರಾಟ

ಉತ್ತರಾಖಂಡ(Uttarakhand)ದ ರಾಜಧಾನಿ ಡೆಹ್ರಾಡೂನ್‌ನಲ್ಲಿ ದೇವಾಲಯ(Temple) ಧ್ವಂಸ ಮಾಡಿದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ರಾತ್ರಿ ವೇಳೆ ದೇವಸ್ಥಾನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಯೊಬ್ಬ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದಾನೆ. ತಲೆಗೆ ಕ್ಯಾಪ್​ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡೆಹ್ರಾಡೂನ್-ಹರಿದ್ವಾರ ರಸ್ತೆಯಲ್ಲಿರುವ ಹರ್ರಾವಾಲಾದ ಮಾತಾ ಕಾಳಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ಡೆಹ್ರಾಡೂನ್: ಕಿಡಿಗೇಡಿಯಿಂದ ದೇವಾಲಯದ ಗೇಟ್​ ಮೇಲೆ ಮೂತ್ರ ವಿಸರ್ಜನೆ, ಕಲ್ಲು ತೂರಾಟ
ದೇವಸ್ಥಾನImage Credit source: OpIndia
ನಯನಾ ರಾಜೀವ್
|

Updated on: Dec 13, 2023 | 1:50 PM

Share

ಉತ್ತರಾಖಂಡ(Uttarakhand)ದ ರಾಜಧಾನಿ ಡೆಹ್ರಾಡೂನ್‌ನಲ್ಲಿ ದೇವಾಲಯ(Temple) ಧ್ವಂಸ ಮಾಡಿದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ರಾತ್ರಿ ವೇಳೆ ದೇವಸ್ಥಾನದ ಮೇಲೆ ದಾಳಿ ನಡೆಸಿದ ಕಿಡಿಗೇಡಿಯೊಬ್ಬ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದಾನೆ. ತಲೆಗೆ ಕ್ಯಾಪ್​ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಗೇಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡೆಹ್ರಾಡೂನ್-ಹರಿದ್ವಾರ ರಸ್ತೆಯಲ್ಲಿರುವ ಹರ್ರಾವಾಲಾದ ಮಾತಾ ಕಾಳಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.

ಮಧ್ಯರಾತ್ರಿ 1 ಗಂಟೆ ವೇಳೆಗೆ ಘಟನೆ ನಡೆದಿದೆ, ದೇವಾಲಯದ ಹೊರಗೆ ಮೂತ್ರ ವಿಸರ್ಜನೆ ಮಾಡಿದ್ದು, ಬಳಿಕ ದೇವಸ್ಥಾನಕ್ಕೆ ಕಲ್ಲು ಎಸೆದಿದ್ದಾನೆ, ದೇವಾಲಯದ ಮುಂಭಾಗಕ್ಕೆ ಹಾನಿಯುಂಟಾಗಿದೆ, ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ದೋಯಿವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ. ಈ ಘಟನೆಯು ಸ್ಥಳೀಯ ಹಿಂದೂ ಸಮುದಾಯದಲ್ಲಿ ಕೋಪವನ್ನು ಹುಟ್ಟುಹಾಕಿದೆ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಒತ್ತಾಯಿಸಲಾಗುತ್ತಿದೆ.

ಗುರುತಿಸುವಿಕೆ ಸವಾಲಿನದಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದು, ಕೃತ್ಯದ ಹಿಂದಿನ ಉದ್ದೇಶವನ್ನು ನಿರ್ಧರಿಸಲು ಕಷ್ಟವಾಗುತ್ತಿದೆ.ವ್ಯಕ್ತಿಯನ್ನು ಬಂಧಿಸಿದ ನಂತರ, ಹೆಚ್ಚಿನ ತನಿಖೆ ನಡೆಯಲಿದೆ.

ಮತ್ತಷ್ಟು ಓದಿ: Pakistan: ಹಿಂದೂ ದೇವಾಲಯದ ಮೇಲೆ ದಾಳಿ, ದೇವತೆಗಳ ವಿಗ್ರಹಗಳು ಧ್ವಂಸ!

ನವೆಂಬರ್‌ನಲ್ಲಿ ಜಾರ್ಖಂಡ್‌ನಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, ಅರ್ಚಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ದೇವಾಲಯದಲ್ಲಿನ ಪ್ರತಿಮೆಯನ್ನು ಹಾನಿಗೊಳಿಸಿದ್ದರು, ನವೆಂಬರ್‌ನಲ್ಲಿ, ಮುರಾದಾಬಾದ್‌ನ ದೇವಾಲಯವನ್ನೂ ಸಹ ಧ್ವಂಸಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್