AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Char Dham Yatra: ಕೇದಾರನಾಥ ಯಾತ್ರಾರ್ಥಿಗಳಿಗೆ ಮಳೆ, ಹಿಮಪಾತದ ಎಚ್ಚರಿಕೆ ನೀಡಿದ ಉತ್ತರಾಖಂಡ ಸರ್ಕಾರ

ಕಳೆದ ಕೆಲವು ದಿನಗಳಿಂದ ಕೇದಾರನಾಥದಲ್ಲಿ ಮಳೆ, ಹಿಮಪಾತವಾಗುತ್ತಿದೆ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಎಚ್ಚರಿಕೆವಹಿಸುವಂತೆ ಉತ್ತರಾಖಂಡ(Uttarakhand) ಸರ್ಕಾರ ಸೂಚನೆ ನೀಡಿದೆ.

Char Dham Yatra: ಕೇದಾರನಾಥ ಯಾತ್ರಾರ್ಥಿಗಳಿಗೆ ಮಳೆ, ಹಿಮಪಾತದ ಎಚ್ಚರಿಕೆ ನೀಡಿದ ಉತ್ತರಾಖಂಡ ಸರ್ಕಾರ
ಕೇದಾರನಾಥ ದೇವಾಲಯ
ನಯನಾ ರಾಜೀವ್
|

Updated on: Apr 23, 2023 | 3:50 PM

Share

ಕಳೆದ ಕೆಲವು ದಿನಗಳಿಂದ ಕೇದಾರನಾಥದಲ್ಲಿ ಮಳೆ, ಹಿಮಪಾತವಾಗುತ್ತಿದೆ ಈ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳು ಎಚ್ಚರಿಕೆವಹಿಸುವಂತೆ ಉತ್ತರಾಖಂಡ(Uttarakhand) ಸರ್ಕಾರ ಸೂಚನೆ ನೀಡಿದೆ. ಕೇದಾರನಾಥದಲ್ಲಿ ಮಧ್ಯಂತರ ಮಳೆ ಮತ್ತು ಹಿಮಪಾತವನ್ನು ಗಮನದಲ್ಲಿಟ್ಟುಕೊಂಡು, ಉತ್ತರಾಖಂಡ ಸರ್ಕಾರವು ಕೇದಾರನಾಥ ಧಾಮಕ್ಕೆ ಹೋಗುವ ಎಲ್ಲಾ ಯಾತ್ರಿಕರು ಕೇದಾರನಾಥ ಧಾಮಕ್ಕೆ ಹೋಗುವ ಮೊದಲು ಹವಾಮಾನ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಮತ್ತು ಸಾಕಷ್ಟು ಸಾಮಾನುಗಳನ್ನು ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಿದೆ.

ಪ್ರಯಾಣಿಕರು ಪ್ರಯಾಣವನ್ನು ಪ್ರಾರಂಭಿಸಿದ ತಕ್ಷಣ ಅಥವಾ ಪ್ರಯಾಣದ ಸಮಯದಲ್ಲಿ ಅನಾರೋಗ್ಯದ ಸಂದರ್ಭದಲ್ಲಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬಹುದು ಮತ್ತು ವೈದ್ಯರನ್ನು ಸಂಪರ್ಕಿಸಬಹುದು. ಯಾತ್ರೆಯನ್ನು ಸುಗಮ, ಸುರಕ್ಷಿತ ಮತ್ತು ತಡೆರಹಿತವಾಗಿ ನಡೆಸಲು ರಾಜ್ಯ ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ. ಪ್ರಯಾಣದ ವ್ಯವಸ್ಥೆಗಳನ್ನು ಉನ್ನತ ಮಟ್ಟದಲ್ಲಿ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್ ಮಾತನಾಡಿ, ಕೇದಾರನಾಥ ಧಾಮದಲ್ಲಿ ನಿನ್ನೆ ಭಾರೀ ಹಿಮಪಾತವಾಗಿತ್ತು, ಯಾತ್ರಾರ್ಥಿಗಳು ಎಚ್ಚರದಿಂದಿರಿ ಮತ್ತು ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಪ್ರಾರಂಭಿಸಲು ವಿನಂತಿಸಿದ್ದಾರೆ.

ಶನಿವಾರದಂದು ಅಕ್ಷಯ ತೃತೀಯ ಶುಭ ಸಂದರ್ಭದಲ್ಲಿ ಗಂಗೋತ್ರಿ-ಯಮುನೋತ್ರಿಯ ಬಾಗಿಲು ತೆರೆದ ನಂತರ, ಚಾರ್ ಧಾಮ್‌ನ ಯಾತ್ರೆ ಶುರುವಾಗಿದೆ. ಈ ಬಾರಿ ಚಾರ್ ಧಾಮ್ ಯಾತ್ರೆಯನ್ನು ಸುಗಮ ಹಾಗೂ ಭಕ್ತರಿಗೆ ಸುರಕ್ಷಿತವಾಗಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಯಾತ್ರಾರ್ಥಿಗಳು ಯಾತ್ರೆಯ ಮಾರ್ಗದಲ್ಲಿ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ.

ಮತ್ತಷ್ಟು ಓದಿ: Char Dham Yatra: ಕೇದಾರನಾಥ ಧಾಮ ಹಿಂದೂ ಭಕ್ತರಿಗೆ ಏಪ್ರಿಲ್ 25 ರಂದು ತೆರೆಯಲಿದೆ; ಹೆಲಿಕಾಪ್ಟರ್ ಸವಾರಿ ಲಭ್ಯ

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಆರೋಗ್ಯ ಸಚಿವ ಡಾ.ಧನ್ ಸಿಂಗ್ ರಾವತ್ ಅವರ ಸೂಚನೆ ಮೇರೆಗೆ ಆರೋಗ್ಯ ಕಾರ್ಯದರ್ಶಿ ಡಾ.ಆರ್.ಕೆ. ರಾಜೇಶ್ ಕುಮಾರ್ ಅವರು ಚಾರ್ ಧಾಮ್ ಯಾತ್ರೆ ಮಾರ್ಗದಲ್ಲಿ ಆರೋಗ್ಯ ಸೇವೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸರಣಿಯಲ್ಲಿ ಆರೋಗ್ಯ ಕಾರ್ಯದರ್ಶಿ ಕೇದಾರನಾಥ ಧಾಮಕ್ಕೆ ಭೇಟಿ ನೀಡುತ್ತಿದ್ದಾರೆ ಮತ್ತು ವಿವಿಧ ಸ್ಥಳಗಳಲ್ಲಿ ಆರೋಗ್ಯ ಘಟಕಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾತ್ರೆಗೆ ಬರುವ ಎಲ್ಲ ಯಾತ್ರಾರ್ಥಿಗಳನ್ನು ಸರ್ಕಾರ ಸ್ವಾಗತಿಸುತ್ತದೆ. ಇದೇ ವೇಳೆ 55 ವರ್ಷ ಮೇಲ್ಪಟ್ಟ ಭಕ್ತರಿಗೆ ಶುಗರ್, ಬಿಪಿ, ಹೃದ್ರೋಗದಂತಹ ಯಾವುದೇ ಕಾಯಿಲೆ ಇದ್ದಲ್ಲಿ ಮೊದಲೇ ಮಾಹಿತಿ ನೀಡಿ ಎಂದು ತಿಳಿಸಿದ್ದಾರೆ.

ಉತ್ತರಾಖಂಡದ ಚಾರ್ ಧಾಮ್ ಯಾತ್ರೆಯು ಭಾರತದ ಅತ್ಯಂತ ಜನಪ್ರಿಯ ಹಿಂದೂ ಯಾತ್ರೆಗಳಲ್ಲಿ ಒಂದಾಗಿದೆ. ಈ ಯಾತ್ರೆಯಲ್ಲಿ ಹಿಮಾಲಯದ ಎತ್ತರದಲ್ಲಿರುವ ಬದರಿನಾಥ, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಎಂಬ ನಾಲ್ಕು ಪವಿತ್ರ ಸ್ಥಳಗಳಿಗೆ ಪ್ರಯಾಣಬೆಳೆಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ