ಅಶಿಸ್ತಿನ ವರ್ತನೆಗಾಗಿ 15 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದ ಉತ್ತರಾಖಂಡ ವಿಧಾನಸಭಾ ಸ್ಪೀಕರ್

ನಿರ್ಧಾರಕ್ಕೆ ಸಂಬಂಧಿಸಿದಂತೆ ಸದಸ್ಯರಿಗೆ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಅದನ್ನು ಸಂವಹನದ ಮೂಲಕ ಪರಿಹರಿಸಬಹುದು. ಕಾರ್ಯದರ್ಶಿಯ ಟೇಬಲ್ ಅನ್ನು ಹತ್ತುವುದು ಮತ್ತು ಕುರ್ಚಿಯ ಹತ್ತಿರ ಬರಲು ಪ್ರಯತ್ನಿಸುವುದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ವಿಷಯವಾಗಿದೆ.

ಅಶಿಸ್ತಿನ ವರ್ತನೆಗಾಗಿ 15 ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಿದ ಉತ್ತರಾಖಂಡ ವಿಧಾನಸಭಾ ಸ್ಪೀಕರ್
ರಿತು ಖಂಡೂರಿ ಭೂಷಣ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 14, 2023 | 7:39 PM

ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ ನಂತರ ಉತ್ತರಾಖಂಡ(Uttarakhand) ವಿಧಾನಸಭೆ ಸ್ಪೀಕರ್ ರಿತು ಖಂಡೂರಿ ಭೂಷಣ್ (Ritu Khanduri Bhushan) 15 ಕಾಂಗ್ರೆಸ್ (Congress) ಶಾಸಕರನ್ನು ಸದನದ ಕಲಾಪಕ್ಕೆ ಹಾಜರಾಗದಂತೆ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿದ್ದಾರೆ. ಬಜೆಟ್ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಶಾಸಕರಲ್ಲಿರಲ್ಲಿ ಇಬ್ಬರು ವಿಧಾನಸಭೆ ಕಾರ್ಯದರ್ಶಿ ಮೇಜಿನ ಮೇಲೆ ಹತ್ತಿ ವಿರೋಧ ಪಕ್ಷವು ಮಂಡಿಸಿದ ವಿಶೇಷ ಹಕ್ಕು ಉಲ್ಲಂಘನೆಯನ್ನು ತಿರಸ್ಕರಿಸಿದ ಸಭಾಪತಿಯ ನಿರ್ಧಾರವನ್ನು ವಿರೋಧಿಸಿದ್ದಾರೆ. ನಂತರ ಸ್ಪೀಕರ್ ದಿನದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.

ನಿರ್ಧಾರಕ್ಕೆ ಸಂಬಂಧಿಸಿದಂತೆ ಸದಸ್ಯರಿಗೆ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಅದನ್ನು ಸಂವಹನದ ಮೂಲಕ ಪರಿಹರಿಸಬಹುದು. ಕಾರ್ಯದರ್ಶಿಯ ಟೇಬಲ್ ಅನ್ನು ಹತ್ತುವುದು ಮತ್ತು ಕುರ್ಚಿಯ ಹತ್ತಿರ ಬರಲು ಪ್ರಯತ್ನಿಸುವುದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ವಿಷಯವಾಗಿದೆ. ಈ ರೀತಿಯ ಅಶಿಸ್ತಿನ ನಡವಳಿಕೆಯು ಸರಿಯಲ್ಲ ಎಂದು ಖಂಡೂರಿ ಖಡಕ್ ಆಗಿ ಹೇಳಿದ್ದಾರೆ. ಗದ್ದಲದ ಸಮಯದಲ್ಲಿ ವಿಧಾನಸಭಾ ಕಾರ್ಯದರ್ಶಿ ಹೇಮ್ ಪಂತ್ ಅವರ ಮೇಜಿನ ಮೇಲೆ ಕಾಂಗ್ರೆಸ್ ಶಾಸಕರಾದ ಆದೇಶ್ ಚೌಹಾಣ್ ಪಿರಾನ್ ಕಲಿಯಾರ್ ಫುರ್ಖಾನ್ ಅಹ್ಮದ್ ಹತ್ತಿ ಪ್ರತಿಭಟನೆ ನಡೆಸಿದ್ದರು.

ಚೌಹಾಣ್ ಅವರು ಉಧಮ್ ಸಿಂಗ್ ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ವಿರುದ್ಧ ವಿಶೇಷ ಹಕ್ಕು ಮಂಡಿಸಿದ್ದರು. ರಾಜ್ಯ ಸರ್ಕಾರವು ಅವರಿಗೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಸಭಾಧ್ಯಕ್ಷರು ವಿಶೇಷಾಧಿಕಾರದ ಪ್ರಸ್ತಾವವನ್ನು ತಿರಸ್ಕರಿಸಿದರು. ಫೆಬ್ರವರಿ 9 ರಂದು ಡೆಹ್ರಾಡೂನ್‌ನಲ್ಲಿ ಪ್ರತಿಭಟನಾ ನಿರತ ಯುವಕರ ಮೇಲೆ ಲಾಠಿ ಚಾರ್ಜ್ ಮತ್ತು ನಿರುದ್ಯೋಗದ ಬಗ್ಗೆ ನಿಯಮ 310 (ಮುಂದೂಡುವ ನಿರ್ಣಯ) ಅಡಿಯಲ್ಲಿ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿ ಗದ್ದಲ ಸೃಷ್ಟಿಸಿವೆ.

ಇದನ್ನೂ ಓದಿ:Video Viral: ಚಲಿಸುತ್ತಿದ್ದ ಕಾರಿನಿಂದ ಹಣ ಎಸೆದ ಹರಿಯಾಣದ ವ್ಯಕ್ತಿ

ನಿಯಮ 58 ರ ಅಡಿಯಲ್ಲಿ ಸ್ಪೀಕರ್ ಈ ವಿಷಯದ ಬಗ್ಗೆ ವಿಚಾರಣೆಗೆ ಅವಕಾಶ ಮಾಡಿಕೊಟ್ಟಾಗ ಪ್ರಶ್ನೋತ್ತರ ಅವಧಿ ಪ್ರಾರಂಭವಾಯಿತು. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕರು ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರಯತ್ನಿಸಿದ್ದು, PWD ಮತ್ತು ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರ ಉತ್ತರಗಳಿಗೆ ಅತೃಪ್ತಿ ವ್ಯಕ್ತಪಡಿಸಿದರು.

ಬೆಳಗ್ಗೆ 11:20ರ ಸುಮಾರಿಗೆ ತೆಹ್ರಿ ಅಣೆಕಟ್ಟಿನ ಪ್ರಶ್ನೆಗೆ ಕಾಂಗ್ರೆಸ್ ಶಾಸಕರು ಸದನದ ಬಾವಿಗೆ ಬಂದು ಘೋಷಣೆಗಳನ್ನು ಕೂಗಿದರು. ಸ್ಪೀಕರ್ ಖಂಡೂರಿ ಅವರು ಶಾಸಕರನ್ನು ತಮ್ಮ ಆಸನಗಳಲ್ಲಿ ಕುಳಿತುಕೊಳ್ಳಲು ಹೇಳಿದ್ದು ಮುಂದಿನ ಪ್ರಶ್ನೆಗೆ ಮುಂದುವರಿಯುವ ಅವರ ನಿರ್ಧಾರವನ್ನು ಶಾಸಕರು ಅಗೌರವಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಬೆಳಗ್ಗೆ 11 ಗಂಟೆಗೆ ಆರಂಭವಾದ ಕಲಾಪಕ್ಕೂ ಮುನ್ನ ಕಾಂಗ್ರೆಸ್ ಶಾಸಕರು ಕಬ್ಬು ಹಿಡಿದು ಪ್ರತಿಭಟನೆ ನಡೆಸಿ, ಕಬ್ಬು ಬೆಳೆಗಾರರನ್ನು ನಿರ್ಲಕ್ಷಿಸಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೇಮಕಾತಿ ಹಗರಣಗಳು ಮತ್ತು ಸಿಬಿಐ ತನಿಖೆ, ಭ್ರಷ್ಟಾಚಾರ, ನಿರುದ್ಯೋಗ, ಫೆಬ್ರವರಿ 9 ರಂದು ಪ್ರತಿಭಟನಾ ನಿರತ ಯುವಕರ ಮೇಲೆ ಲಾಠಿ ಚಾರ್ಜ್ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರೋಧ ಪಕ್ಷವು ಬಜೆಟ್ ಅಧಿವೇಶನದ ಉದ್ಘಾಟನಾ ದಿನದಂದು ವಿಧಾನಸಭೆಯ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸಿತ್ತು.

ಖತೀಮಾ ಶಾಸಕ ಮತ್ತು ವಿರೋಧ ಪಕ್ಷದ ಉಪನಾಯಕ ಭುವನ್ ಚಂದ್ರ ಕಪ್ರಿ ಮಾತನಾಡಿ, ಪುಷ್ಕರ್ ಸಿಂಗ್ ನೇತೃತ್ವದ ರಾಜ್ಯ ಸರ್ಕಾರ ಕಬ್ಬಿನ ಎಂಎಸ್‌ಪಿಯನ್ನು ಹೆಚ್ಚಿಸದೆ ರೈತರನ್ನು ನಿರ್ಲಕ್ಷಿಸುತ್ತಿದೆ. ಇಂದಿಗೂ ಉತ್ತರಾಖಂಡ ಸರ್ಕಾರ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅನುಸರಿಸುತ್ತಿದೆ. ಪಕ್ಕದ ರಾಜ್ಯ ಸರ್ಕಾರ ಕಬ್ಬಿನ ಎಂಎಸ್‌ಪಿ ಹೆಚ್ಚಿಸಿದರೆ, ನಮ್ಮ ಸರ್ಕಾರ ಆ ಬಗ್ಗೆ ಯೋಚಿಸುತ್ತೇವೆ ಎಂದು ಹೇಳುತ್ತದೆ. ಕಬ್ಬು ಬೆಳೆಗಾರರಿಗೆ ಯಾವುದೇ ಬಾಕಿ ಪಾವತಿ ಮಾಡಿಲ್ಲ. ಇದು ರೈತ ವಿರೋಧಿ ಸರ್ಕಾರ ಎಂದಿದ್ದಾರೆ.

ಇದು ಸಂವಿಧಾನದ ಕೊಲೆಯಾಗಿದೆ. ಚುನಾಯಿತ ಪ್ರತಿನಿಧಿಗಳು ಸದನದಲ್ಲಿ ಧ್ವನಿ ಎತ್ತದಂತೆ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಗರಿಮಾ ಮೆಹ್ರಾ ದಸೌನಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ