AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Avalanche: ಉತ್ತರಾಖಂಡದಲ್ಲಿ ಹಿಮಪಾತದ ಸ್ಥಳದಲ್ಲಿ ಇಂದು 7 ಮೃತದೇಹ ಪತ್ತೆ; ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆ

ದುರಂತ ನಡೆದ ಸ್ಥಳದಿಂದ ಇಂದು ಇನ್ನೂ 7 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉತ್ತರಕಾಶಿಯ ಹಿಮಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Uttarakhand Avalanche: ಉತ್ತರಾಖಂಡದಲ್ಲಿ ಹಿಮಪಾತದ ಸ್ಥಳದಲ್ಲಿ ಇಂದು 7 ಮೃತದೇಹ ಪತ್ತೆ; ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆ
ಉತ್ತರಾಖಂಡದಲ್ಲಿ ಹಿಮಪಾತ
TV9 Web
| Updated By: ಸುಷ್ಮಾ ಚಕ್ರೆ|

Updated on: Oct 07, 2022 | 5:52 PM

Share

ಡೆಹ್ರಾಡೂನ್: ಉತ್ತರಾಖಂಡದ (Uttarakhand) ದ್ರೌಪದಿ ಕಾ ದಂಡಾ ಶಿಖರದಲ್ಲಿ ಭಾರೀ ಹಿಮಪಾತ ಸಂಭವಿಸಿ 3 ದಿನಗಳು ಕಳೆದಿವೆ. ಈ ಹಿಮಪಾತದಲ್ಲಿ 20ಕ್ಕೂ ಹೆಚ್ಚು ಪರ್ವತಾರೋಹಿಗಳು ಹಿಮದಲ್ಲಿ ಸಿಲುಕಿದ್ದರು. ಅವರ ಶೋಧ ಕಾರ್ಯಾಚರಣೆಗೆ ಸಹಾಯ ಮಾಡಲು ಭಾರತೀಯ ವಾಯುಪಡೆಯ (IAF) ಎರಡು ಹೆಲಿಕಾಪ್ಟರ್‌ಗಳನ್ನು ನಿಯೋಜನೆ ಮಾಡಲಾಗಿತ್ತು. ದುರಂತ ನಡೆದ ಸ್ಥಳದಿಂದ ಇಂದು ಇನ್ನೂ 7 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉತ್ತರಕಾಶಿಯ ಹಿಮಕುಸಿತದಿಂದ (Uttarakashi Avalanche) ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ ಎಂದು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ತಿಳಿಸಿದೆ.

NIMನಿಂದ ಪರ್ವತಾರೋಹಣ ತರಬೇತುದಾರರು ಮತ್ತು ಬೋಧಕರ 41 ಸದಸ್ಯರ ತಂಡಕ್ಕೆ ಹಿಮಪಾತವು ಅಪ್ಪಳಿಸಿ 3 ದಿನಗಳಾಗಿವೆ. ಉತ್ತರಕಾಶಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಗುರುವಾರ 15 ಶವಗಳನ್ನು ಹೊರತೆಗೆಯಲಾಗಿತ್ತು. ಈ ದುರಂತದಲ್ಲಿ ಇನ್ನೂ 7 ಜನರು ನಾಪತ್ತೆಯಾಗಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಎನ್ಐಎಂ ಹೇಳಿಕೆ ತಿಳಿಸಿದೆ. ನಾಪತ್ತೆಯಾಗಿರುವ ಉಳಿದ ತರಬೇತಿ ಪರ್ವತಾರೋಹಿಗಳು ಮತ್ತು ಬೋಧಕರಿಗೆ ಹುಡುಕಾಟ ನಡೆಯುತ್ತಿದೆ. ದ್ರೌಪದಿ ಕಾ ದಂಡ ಶಿಖರದಲ್ಲಿ ಕೆಟ್ಟ ಹವಾಮಾನವಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ದೇವೇಂದ್ರ ಪಟ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದ ಬಿಲಾಸ್​​ಪುರದಲ್ಲಿರುವ ಏಮ್ಸ್ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ: ಮೋದಿ

ಕಳೆದ ಮಂಗಳವಾರ ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ತಂಡವು ದ್ರೌಪದಿ ಕಾ ದಂಡ II ಶಿಖರವನ್ನು ಏರಿ ಹಿಂದಿರುಗುತ್ತಿದ್ದಾಗ 17,000 ಅಡಿ ಎತ್ತರದಲ್ಲಿ ಹಿಮಕುಸಿತ ಸಂಭವಿಸಿತ್ತು. ಉತ್ತರಾಖಂಡದ ಗಡಿ ಜಿಲ್ಲೆ ಉತ್ತರಕಾಶಿಯಲ್ಲಿನ ಹಿಮಪಾತ ದುರಂತಕ್ಕೆ ಸಂಬಂಧಿಸಿದಂತೆ ಕಳೆದ 4 ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಒಟ್ಟಾರೆ 26 ಜನ ಪರ್ವತಾರೋಹಿಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಉಳಿದವರಿಗಾಗಿ ರಕ್ಷಣಾ ಕಾರ್ಯ ನಡೆಯುತ್ತಿದೆ.

ಉತ್ತರಕಾಶಿ ಜಿಲ್ಲೆಯ ದ್ರೌಪದಿಯ ದಂಡ-2 ಪ್ರದೇಶಕ್ಕೆ ಅಕ್ಟೋಬರ್​ 4ರಂದು ನೆಹರೂ ಪರ್ವತಾರೋಹಣ ಸಂಸ್ಥೆಯ 40 ಜನ ಪರ್ವತಾರೋಹಿಗಳ ತಂಡ ತೆರಳಿತ್ತು. ಈ ವೇಳೆ, ಹಿಮಕುಸಿತ ಉಂಟಾಗಿ ಪರ್ವತಾರೋಹಿಗಳು ಸಿಲುಕಿದ್ದರು. ಮೊದಲ ದಿನವೇ 10 ಜನರ ಮೃತಪಟ್ಟಿದ್ದರು. ಆದರೆ, ಪ್ರತಿಕೂಲ ಹವಾಮಾನ ಹಾಗೂ ಹಿಮಪಾತದ ಬಿರುಕುಗಳಲ್ಲಿ ಪರ್ವತಾರೋಹಿಗಳು ಸಿಲುಕಿರುವ ಕಾರಣ ರಕ್ಷಣಾ ಕಾರ್ಯಕ್ಕೆ ತೊಂದರೆ ಉಂಟಾಗಿತ್ತು.

ಇದನ್ನೂ ಓದಿ: Breaking News ಉತ್ತರಾಖಂಡ್​ನಲ್ಲಿ ಹಿಮಕುಸಿತ; 10 ಮಂದಿ ಸಾವು, 8 ಮಂದಿಯ ರಕ್ಷಣೆ

ಗುರುವಾರದವರೆಗೆ ಒಟ್ಟು 16 ಶವಗಳನ್ನು ಹೊರತೆಗೆಯಲಾಗಿತ್ತು. ಇದರಲ್ಲಿ ಇಬ್ಬರು ತರಬೇತುದಾರರು ಮತ್ತು 14 ಪ್ರಶಿಕ್ಷಣಾರ್ಥಿಗಳು ಸೇರಿದ್ದರು. ಇಂದು ಇನ್ನೂ 7 ಪರ್ವತಾರೋಹಿಗಳ ಮೃತದೇಹಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟಾರೆ ಒಟ್ಟಾರೆ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಈ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ 30 ಜನರ ತಂಡವನ್ನು ನಿಯೋಜಿಸಲಾಗಿದೆ. ಐಟಿಬಿಪಿ, ನೆಹರು ಪರ್ವತಾರೋಹಣ ಸಂಸ್ಥೆ, ವಾಯುಸೇನೆ, ಸೇನೆ, ಎಸ್‌ಡಿಆರ್‌ಎಫ್ ಹೀಗೆ ವಿವಿಧ ತಂಡಗಳ ಒಟ್ಟು 30 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್