ಉತ್ತರಾಖಂಡದಲ್ಲಿ ಬಸ್ ದುರಂತ; 100 ಮೀಟರ್ ಆಳದ ಕಂದಕಕ್ಕೆ ಉರುಳಿದ ಬಸ್, ಐವರು ಸಾವು
ಉತ್ತರಾಖಂಡದ ರಿಷಿಕೇಶ-ಬದ್ರಿನಾಥ್ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. 30-35 ಪ್ರಯಾಣಿಕರಿದ್ದ ಬಸ್ 100 ಮೀಟರ್ ಆಳದ ಕಂದಕಕ್ಕೆ ಉರುಳಿ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ರಿಷಿಕೇಶ, ನವೆಂಬರ್ 17: ಉತ್ತರಾಖಂಡದ ರಿಷಿಕೇಶ-ಬದ್ರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುಮಾರು 30ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉತ್ತರಾಖಂಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಿಷಿಕೇಶದಿಂದ ಶ್ರೀನಗರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ಸೊಂದು ಮಂಗಳವಾರ ಬೆಳಗ್ಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಕಂದಕಕ್ಕೆ ಬಿದ್ದಿದೆ. ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಸುಮಾರು 30ರಿಂದ 35 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಬ್ಯಾಸಿ ಮತ್ತು ಧಲ್ವಾಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಇದನ್ನೂ ಓದಿ:
ಕೆಎಸ್ಆರ್ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು! ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸಾವು
ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 20 ಗಾಯಾಳುಗಳನ್ನು ರಕ್ಷಿಸಿ ಆಂಬ್ಯುಲೆನ್ಸ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಐವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ऋषिकेश, उत्तराखंड: आज सुबह गुलार बाजार के पास, एक बस पुल से लगभग 100 मीटर नीचे खाई में गिर गई। सूचना मिलने पर, ब्यासी और ढालवाला पोस्ट की SDRF टीमें तुरंत घटनास्थल पर पहुंचीं और बचाव कार्य शुरू किया।
शुरुआती जानकारी के अनुसार, बस में लगभग 30-35 लोग सवार थे, जिनमें से करीब 20 घायलों को सुरक्षित बाहर निकाल लिया गया है। घायलों को एम्बुलेंस के जरिए अस्पताल भेजा जा रहा है।
घटना की गंभीरता को देखते हुए, कमांडेंट अर्पण यदुवंशी के निर्देश पर, SDRF की अतिरिक्त टीमों को भी घटनास्थल के लिए रवाना किया गया है। मौके पर पुलिस बल मौजूद है, और SDRF तथा पुलिस के समन्वय से राहत एवं बचाव कार्य लगातार जारी है।
(सोर्स: SDRF)
— ANI_HindiNews (@AHindinews) November 17, 2026
ರಕ್ಷಣಾ ಕಾರ್ಯಾಚರಣೆಗೆ ಹೆಚ್ಚುವರಿ ತಂಡ ಅಪಘಾತದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಅರ್ಪಣ್ ಯದುವಂಶಿ ಅವರ ಸೂಚನೆಯಂತೆ ಹೆಚ್ಚುವರಿ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಂದಕದ ಆಳ ಮತ್ತು ಗುಡ್ಡಗಾಡು ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ಸವಾಲು ಎದುರಾಗಿದೆ.
ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಸ್ಥಳೀಯ ರಕ್ಷಣಾ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಬಸ್ ರಸ್ತೆ ಬಿಟ್ಟು ಕಂದಕಕ್ಕೆ ಉರುಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ತನಿಖೆಯ ಬಳಿಕ ಮಾಹಿತಿ ಲಭ್ಯವಾಗಬೇಕಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
