ಉತ್ತರಾಖಂಡ್​ ಮುಖ್ಯಮಂತ್ರಿ ಆಯ್ಕೆ ಸಭೆ ಇಂದು; ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ

ಹಿಂದಿನ ಅವಧಿಯಲ್ಲಿ ಉತ್ತರಾಖಂಡ್​​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯನ್ನು ಬದಲಾಯಿಸಲಾಗಿತ್ತು. ಬಳಿಕ ಪುಷ್ಕರ್​ ಸಿಂಗ್ ಧಮಿಯವರನ್ನು ಸಿಎಂ ಆಗಿ ನೇಮಕ ಮಾಡಲಾಗಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಭುವನ್​ ಚಂದ್ರ ಕಪ್ರಿ ಎದುರು 6 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ.

ಉತ್ತರಾಖಂಡ್​ ಮುಖ್ಯಮಂತ್ರಿ ಆಯ್ಕೆ ಸಭೆ ಇಂದು; ನಾಳೆಯೇ ಹೊಸ ಸಿಎಂ ಪ್ರಮಾಣ ವಚನ ಸ್ವೀಕಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 21, 2022 | 10:57 AM

ಉತ್ತರಾಖಂಡ್​​ಗೆ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಂಬಂಧ ಇಂದು ಡೆಹ್ರಾಡೂನ್​​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಉತ್ತರಾಖಂಡ್​​ನ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್​ ಮತ್ತು ಮೀನಾಕ್ಷಿ ಲೇಖಿ ಈ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ವಕ್ತಾರ ಶಾದಾಬ್ ಶಾಮ್ಸ್ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಮಂಗಳವಾರವೇ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ, ಇನ್ನೂ ಹಲವು ಬಿಜೆಪಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಇಂದು ಉತ್ತರಾಖಂಡ್​​​ನಲ್ಲಿ ಆಯ್ಕೆಯಾದ ಹೊಸ ಶಾಸಕರು ಇಂದು ವಿಧಾನಸಭೆಯಲ್ಲಿ ಬೆಳಗ್ಗೆ 11ಗಂಟೆಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಾದ ಬಳಿಕ ಸಭೆ ನಡೆಯಲಿದೆ. ಇಂದು ಶಾಸಕರ ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಸಂಜೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುವುದು ಎಂದು ಉತ್ತರಾಖಂಡ್ ಬಿಜೆಪಿ ಮುಖ್ಯಸ್ಥ ಮದನ್​ ಕೌಶಿಕ್​ ತಿಳಿಸಿದ್ದಾರೆ.

ಹಿಂದಿನ ಅವಧಿಯಲ್ಲಿ ಉತ್ತರಾಖಂಡ್​​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯನ್ನು ಬದಲಾಯಿಸಲಾಗಿತ್ತು. ಬಳಿಕ ಪುಷ್ಕರ್​ ಸಿಂಗ್ ಧಮಿಯವರನ್ನು ಸಿಎಂ ಆಗಿ ನೇಮಕ ಮಾಡಲಾಗಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಭುವನ್​ ಚಂದ್ರ ಕಪ್ರಿ ಎದುರು 6 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ. ಹೀಗಾಗಿ ಅಲ್ಲಿ ಸಿಎಂ ಬದಲಾವಣೆ ಮಾಡಲು ಬಿಜೆಪಿ ನಿರ್ಧರಿಸಿದೆ. ಭಾನುವಾರ ಪುಷ್ಕರ್ ಸಿಂಗ್ ಧಮಿ, ಮದನ್​ ಕೌಶಿಕ್​ ಮತ್ತು ಮಾಜಿ ಕೇಂದ್ರ ಸಚಿವ ರಮೇಶ್​ ಪೋಖ್ರಿಯಾಲ್​​ ನಿಶಾಂಕ್​ ಅವರು ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿ: ಮಂತ್ರಿಗಳಿಗೆ ಲೆಟರ್ ಕೊಟ್ಟು ಫೋಟೊ ಹಾಕಿದ್ರೆ ಪ್ರಯೋಜನವಿಲ್ಲ, ಮಂಡ್ಯಕ್ಕೆ ಏನು ಅನುದಾನ ತಂದಿದ್ದೀರಿ?: ಸುಮಲತಾಗೆ ರವೀಂದ್ರ ಶ್ರೀಕಂಠಯ್ಯ ಪ್ರಶ್ನೆ

Published On - 9:09 am, Mon, 21 March 22