ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು

ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು.

ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್ ರಾವತ್​ಗೆ ಕೊರೊನಾ ಸೋಂಕು; ದೆಹಲಿ ಭೇಟಿ ರದ್ದು
ತೀರಥ್​ ಸಿಂಗ್ ರಾವತ್​
Follow us
Lakshmi Hegde
|

Updated on: Mar 22, 2021 | 1:36 PM

ಡೆಹ್ರಾಡೂನ್​: ಉತ್ತರಾಖಂಡ ಮುಖ್ಯಮಂತ್ರಿ ತೀರಥ್​ ಸಿಂಗ್​ ರಾವತ್​ ಇತ್ತೀಚೆಗೆ ಭರ್ಜರಿ ಸುದ್ದಿಯಲ್ಲಿದ್ದಾರೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗಿನಿಂದ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬರುತ್ತಿರುವ ತೀರಥ್​ ಅವರೀಗ ಕೊರೊನಾ ಸೋಂಕಿತರಾಗಿದ್ದಾರೆ. ಇಂದು ಟ್ವೀಟ್ ಮಾಡಿರುವ ತೀರಥ್ ಸಿಂಗ್​, ನನಗೆ ಕೊವಿಡ್​-19 ಸೋಂಕು ತಗುಲಿದೆ. ನಾನು ಸದ್ಯಕ್ಕೆ ಆರೋಗ್ಯವಾಗಿದ್ದೇನೆ. ಯಾವುದೇ ಸಮಸ್ಯೆ ಕಾಣಿಸುತ್ತಿಲ್ಲ. ನಾನು ಐಸೋಲೇಟ್ ಆಗಿದ್ದು, ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಮುನ್ನೆಚ್ಚರಿಕಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳಿ, ಎಚ್ಚರಿಕೆಯಿಂದ ಇರಿ ಎಂದು ಹೇಳಿದ್ದಾರೆ.

ತೀರಥ್​ ಸಿಂಗ್ ರಾವತ್​ ಇಂದು ದೆಹಲಿಗೆ ತೆರಳಬೇಕಿತ್ತು. ನಾಲ್ಕು ದಿನ ದೆಹಲಿಯಲ್ಲೇ ಉಳಿಯಲಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಂಪುಟ ಸಚಿವರನ್ನು ಭೇಟಿಯಾಗಲಿದ್ದರು. ಆದರೆ ಸದ್ಯ ಕೊವಿಡ್​ ಸೋಂಕಿತರಾಗಿರುವುದರಿಂದ ಐಸೋಲೇಟ್ ಆಗಿದ್ದಾರೆ.

ಇನ್ನು ಕೊರೊನಾ ಎರಡನೇ ಅಲೆ ನಿಧಾನವಾಗಿ ಎಲ್ಲ ರಾಜ್ಯಗಳಿಗೂ ವ್ಯಾಪಿಸುತ್ತಿದೆ. ಉತ್ತರಾಖಂಡದಲ್ಲೂ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಗೇ ಈ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಲು, ರಾಷ್ಟ್ರೀಯ ರೋಗ ನಿಯಂತ್ರಣಾ ಕೇಂದ್ರ (NCDC)ದ ನಿರ್ದೇಶಕರ ನೇತೃತ್ವದ ತಂಡ ಮಾರ್ಚ್​ 16-17ರಂದು ಇಲ್ಲಿಗೆ ಭೇಟಿ ನೀಡಿತ್ತು. ಈ ತಂಡ ನೀಡಿದ ವರದಿಯನ್ನು ಪರಿಶೀಲನೆ ಮಾಡಿದ ಕೇಂದ್ರ ಸರ್ಕಾರ, ಉತ್ತರಾಖಂಡ ರಾಜ್ಯ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಕುಂಭ ಮೇಳದ ಸಂದರ್ಭದಲ್ಲಿ ಕೊರೊನಾ ಸೋಂಕಿನ ಪ್ರಸರಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ.

ಇದನ್ನೂ ಓದಿ: ಹೆಚ್ಚು ಪ್ರಮಾಣದಲ್ಲಿ ಪಡಿತರ ಪಡೆಯಲು 20 ಮಕ್ಕಳನ್ನು ಯಾಕೆ ಹೆರಬಾರದು: ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್  ಪ್ರಶ್ನೆ

ಭಾರತದಲ್ಲಿ ಅಮೆರಿಕ 200 ವರ್ಷ ಆಳ್ವಿಕೆ ನಡೆಸಿತ್ತು: ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ