ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರಿಗೆ ತಲಾ 1 ಲಕ್ಷ ರೂಪಾಯಿ ಹಣಕಾಸು ನೆರವನ್ನು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗುವವರೆಗೂ ಎಲ್ಲ ರೀತಿಯ ವ್ಯವಸ್ಥೆಯನ್ನು ಸರ್ಕಾರವೇ ಮಾಡಲಿದೆ ಎಂದು ಹೇಳಿದ್ದಾರೆ.

ಸುರಂಗದಲ್ಲಿ ಸಿಲುಕಿದ್ದವರಿಗೆ 1 ಲಕ್ಷ ರೂ. ನೆರವು ಘೋಷಿಸಿದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಪುಷ್ಕರ್ ಸಿಂಗ್ ಧಾಮಿ
Follow us
Ganapathi Sharma
|

Updated on: Nov 28, 2023 | 10:48 PM

ಉತ್ತರಕಾಶಿ, ನವೆಂಬರ್ 28: ಉತ್ತರಾಖಂಡದ (Uttarakhand tunnel) ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಣೆ ಮಾಡಿದ ಬೆನ್ನಲ್ಲೇ ಎಲ್ಲ ಕಾರ್ಮಿಕರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಘೋಷಿಸಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೇ ಕಾರ್ಮಿಕರು ಗುಣಮುಖರಾಗಿ ಮನೆಗೆ ಮರಳುವ ವರೆಗೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಂಪೂರ್ಣ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಉತ್ತರಕಾಶಿಯ ಸಿಲ್ಕ್ಯಾರಾ-ಬರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿ ಕಾರ್ಮಿಕರನ್ನು ಎನ್​ಡಿಆರ್​ಎಫ್ ಸಿಬ್ಬಂದಿ 17 ದಿನಗಳ ಕಾರ್ಯಾಚರಣೆ ಬಳಿಕ ಸೋಮವಾರ ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಮಧ್ಯೆ, ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ ಸುರಂಗದಲ್ಲಿ ಸಿಲುಕಿದ್ದ ಎಲ್ಲ 41 ಮಂದಿಯ ರಕ್ಷಣೆ: ಪ್ರಧಾನಿ ಮೋದಿ, ಸಚಿವ ನಿತಿನ್ ಗಡ್ಕರಿ ಅಭಿನಂದನೆ

ಭಾರತವನ್ನು ಕಟ್ಟುತ್ತಿರುವ ನಮ್ಮ ಕಾರ್ಮಿಕ ಬಂಧುಗಳ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಈ ಕಠಿಣ ಅಭಿಯಾನವನ್ನು ಯಶಸ್ವಿಗೊಳಿಸಿದ ಎಲ್ಲ ವೀರ ಪುರುಷರಿಗೆ ನಾನು ವಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್