AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿದ ಜೀನ್ಸ್’ ಧರಿಸುವ ಮಹಿಳೆಯರು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾರೆ : ಉತ್ತರಾಖಂಡ ಸಿಎಂ ತಿರತ್ ಸಿಂಗ್ ರಾವತ್

Tirath Singh Rawat: ರಿಪ್​ಡ್ ಜೀನ್ಸ್ ಸ್ಟೈಲ್ ಅನ್ನು 'ಕತ್ತರಿ ಸಂಸ್ಕೃತಿ' ಎಂದು ಹೇಳಿದ ತಿರತ್ ಸಿಂಗ್ ರಾವತ್ ಹರಿದ ಜೀನ್ಸ್ ಧರಿಸಿ ಮೊಣಕಾಲು ತೋರಿಸಿದರೆ ಶ್ರೀಮಂತರು ಎಂದೆನಿಸಿಕೊಳ್ಳುವುದಿಲ್ಲ ಎಂಬುದನ್ನು ನಾವು ಕಲಿಸಿಕೊಡಬೇಕಿದೆ ಎಂದಿದ್ದಾರೆ .

'ಹರಿದ ಜೀನ್ಸ್' ಧರಿಸುವ ಮಹಿಳೆಯರು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಾರೆ : ಉತ್ತರಾಖಂಡ ಸಿಎಂ ತಿರತ್ ಸಿಂಗ್ ರಾವತ್
ತೀರಥ್ ಸಿಂಗ್ ರಾವತ್
ರಶ್ಮಿ ಕಲ್ಲಕಟ್ಟ
|

Updated on:Mar 18, 2021 | 11:49 AM

Share

ಡೆಹ್ರಾಡೂನ್ : ಹರಿದ ಜೀನ್ಸ್ ಧರಿಸುವ ಮಹಿಳೆಯರು ಸಮಾಜಕ್ಕೆ ಮತ್ತು ಮಕ್ಕಳಿಗೆ ತಪ್ಪು ಸಂದೇಶವನ್ನು ನೀಡುತ್ತಾರೆ ಎಂದು ಉತ್ತಾರಾಖಂಡ ರಾಜ್ಯದ ನೂತನ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್  ಹೇಳಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ರಾಜ್ಯ ಆಯೋಗ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾವತ್ ಈ ರೀತಿ ಹೇಳಿಕೆ ನೀಡಿದ್ದಾರೆ. ನಾನೊಂದು ಬಾರಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ನನ್ನ ಪಕ್ಕದಲ್ಲಿ ಮಹಿಳೆಯೊಬ್ಬರು ಕುಳಿತಿದ್ದರು. ಆಕೆ ಬೂಟ್ಸ್ ಧರಿಸಿದ್ದರು, ಧರಿಸಿದ ಜೀನ್ಸ್ ಮೊಣಕಾಲಿನ ಭಾಗದಲ್ಲಿ ಹರಿದಿತ್ತು, ಕೈಯಲ್ಲಿ ತುಂಬಾ ಬ್ರೇಸ್ಲೆಟ್. ಆಕೆಯ ಜತೆ ಇಬ್ಬರು ಮಕ್ಕಳಿದ್ದರು. ಆಕೆಯ ಪತಿ ಜೆಎನ್​ಯು ಪ್ರೊಫೆಸರ್. ನೀವೊಂದು ಎನ್​ಜಿಒ ನಡೆಸುತ್ತೀರಿ, ಮೊಣಕಾಲಿನ ಭಾಗದಲ್ಲಿ ಹರಿದಿರುವ ಜೀನ್ಸ್ ಧರಿಸುತ್ತೀರಿ. ಸಮಾಜದಲ್ಲಿ ಓಡಾಡುತ್ತೀರಿ, ನಿಮ್ಮ ಮಕ್ಕಳು ನಿಮ್ಮ ಜತೆಯಲ್ಲಿದ್ದಾರೆ. ನೀವು ಯಾವ ಮೌಲ್ಯವನ್ನು ಹೇಳಿಕೊಡುತ್ತಿದ್ದೀರಿ ಎಂದು ರಾವತ್ ಪ್ರಶ್ನಿಸಿದ್ದಾರೆ.

ರಿಪ್​ಡ್ ಜೀನ್ಸ್ ಸ್ಟೈಲ್ ಅನ್ನು ‘ಕತ್ತರಿ ಸಂಸ್ಕೃತಿ’ ಎಂದು ಹೇಳಿದ ರಾವತ್, ಹರಿದ ಜೀನ್ಸ್ ಧರಿಸಿ ಮೊಣಕಾಲು ತೋರಿಸಿದರೆ ಶ್ರೀಮಂತರು ಎಂದೆನಿಸಿಕೊಳ್ಳುವುದಿಲ್ಲ ಎಂಬುದನ್ನು ನಾವು ಕಲಿಸಿಕೊಡಬೇಕಿದೆ. ಹರಿದ ಜೀನ್ಸ್ ಧರಿಸಿ ನಾನು ನನ್ನ ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೇನೆ? ಮೊಣಕಾಲು ತೋರಿಸುವಲ್ಲಿ ಹುಡುಗಿಯರು ಕಮ್ಮಿಯೇನಿಲ್ಲ. ಇದೆಲ್ಲಾ ಸರಿಯೇ?. ಭಾರತದಲ್ಲಿರುವ ಜನರು ಹರಿದ ಜೀನ್ಸ್ ಧರಿಸುತ್ತಿದ್ದರೆ ಇತರ ದೇಶದ ಜನರು ಮೈಮುಚ್ಚಿಕೊಂಡು, ಯೋಗ ಕಲಿಯುತ್ತಿದ್ದಾರೆ ಎಂದಿದ್ದಾರೆ ರಾವತ್.

ರಾವತ್​ ಅವರ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್ ವಕ್ತಾರ ಗರಿಮಾ ದಸೌನಿ, ಈ ಹೇಳಿಕೆ ಅಸಂಬದ್ಧ ಎಂದಿದ್ದಾರೆ. ಯಾವುದೇ ವ್ಯಕ್ತಿಯ ಉಡುಗೆ ಬಗ್ಗೆ ಮುಖ್ಯಮಂತ್ರಿಯೊಬ್ಬರು ಈ ರೀತಿ ಕಾಮೆಂಟ್ ಮಾಡಬಾರದು. ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳುವಾಗ ಬಿಜೆಪಿ ನಾಯಕರು ಮೌನವಾಗಿರುವುದು ಯಾಕೆ ಎಂದು ಗರಿಮಾ ಪ್ರಶ್ನಿಸಿದ್ದಾರೆ.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾವತ್, ಮೋದಿಯವರು ಸಮಾಜಕ್ಕಾಗಿ ಮಾಡಿದ ಕಾರ್ಯಗಳಿಂದಾಗಿ ಮುಂಬರುವ ಕಾಲದಲ್ಲಿ ಜನರು ಅವರನ್ನು ಶ್ರೀರಾಮ, ಕೃಷ್ಣರಂತೆ ಆರಾಧಿಸುತ್ತಾರೆ ಎಂದಿದ್ದರು.

ಹರಿದ ಜೀನ್ಸ್ ಹೇಳಿಕೆ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು

ಹರಿದ ಜೀನ್ಸ್  ಬಗ್ಗೆ ರಾವತ್ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಮಹಿಳೆಯರು ರೊಚ್ಚಿಗೆದ್ದಿದ್ದಾರೆ.  ರಿಪ್ಡ್  ಜೀನ್ಸ್ ಮತ್ತು ಪುಸ್ತಕ. ಮಹಿಳೆಯರ ಉಡುಗೆ ನೋಡಿ ಗಂಡಸರು ದೇಶದ  ಸಂಸ್ಕೃತಿ ಮತ್ತು  ಆಚಾರಗಳ ಬಗ್ಗೆ ಅಭಿಪ್ರಾಯ ಪಡುತ್ತಾರೆ. ನಿಮ್ಮ ಆಲೋಚನೆಗಳನ್ನು ಬದಲಿಸಿ ರಾವತ್  ಜೀ,  ಹಾಗಾದರೆ ಮಾತ್ರ ದೇಶ ಬದಲಾಗಬಲ್ಲದು ಎಂದು  ಪ್ರಿಯಾಂಕಾ  ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಮಹಿಳೆಯರು ತಮಗೆ  ಇಷ್ಟವಾದ  ಉಡುಗೆಯನ್ನು ಧರಿಸುತ್ತಾರೆ. ನೀವು ಅವರನ್ನು ನೋಡುವುದು, ನೋಡಿ ಅಭಿಪ್ರಾಯ ಹೇಳುವುದನ್ನು, ಮಹಿಳೆಯರ ವಿರುದ್ಧ ದ್ವೇಷ ಕಾರುವುದನ್ನು ನಿಲ್ಲಿಸಿ  ಎಂದು ರುಚಿರಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ  ಓದಿ : ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

Published On - 11:39 am, Thu, 18 March 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ