AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓ ಹೆಣ್ಮಗು… ಸ್ಕೂಟಿಯಲ್ಲಿ ಬಂದು ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ! ಮುಂದೇನಾಯ್ತು ನೋಡಿ

ಉತ್ತರಾಖಂಡ್‌ನ ಖತಿಮಾದಲ್ಲಿ ಸ್ಕೂಟರ್‌ ಸವಾರ ಮಹಿಳೆಯೊಬ್ಬರು ರಸ್ತೆಗೆ ಬಂದ ಆನೆಗೆ ಡಿಕ್ಕಿ ಹೊಡೆದಿದ್ದಾರೆ. ಈ ಭೀಕರ ಅಪಘಾತದಲ್ಲಿ ಆನೆಯ ದಂತ ಮುರಿದಿದ್ದು, ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಅರಣ್ಯ ಇಲಾಖೆ ಮುರಿದ ದಂತ ವಶಪಡಿಸಿಕೊಂಡು, ಗಾಯಗೊಂಡ ಆನೆಯ ಆರೋಗ್ಯದ ಮೇಲೆ ನಿಗಾ ಇಡಲು ಬಲೆ ಕ್ಯಾಮರಾಗಳನ್ನು ಅಳವಡಿಸಿದೆ. ಚಾಲಕರು ಅರಣ್ಯ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.

ಓ ಹೆಣ್ಮಗು... ಸ್ಕೂಟಿಯಲ್ಲಿ ಬಂದು ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ! ಮುಂದೇನಾಯ್ತು ನೋಡಿ
ಆನೆಗೆ ಡಿಕ್ಕಿ ಹೊಡೆದು ದಂತ ಮುರಿದ ಮಹಿಳೆ
ಅಕ್ಷಯ್​ ಪಲ್ಲಮಜಲು​​
|

Updated on: May 22, 2026 | 9:58 AM

Share

ಖತಿಮಾ, ಮೇ.22: ಹೆದ್ದಾರಿಯಲ್ಲಿ ಚಲಿಸುವಾಗ ಮುಂದೆ ಬರುವ ವಾಹನಗಳಿಗೆ ಅಥವಾ ಸಣ್ಣ-ಪುಟ್ಟ ನಾಯಿ, ಬೆಕ್ಕು, ಧನಗಳಿಗೆ ಡಿಕ್ಕಿ ಹೊಡೆಯುವುದಿರುವ ಸುದ್ದಿಗಳನ್ನು ಕೇಳಿರಬಹುದು. ಆದರೆ, ಉತ್ತರಾಖಂಡ್‌ನ ಖತಿಮಾ ಎಂಬಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ದೈತ್ಯ ಆನೆಗೇ ನೇರವಾಗಿ ಡಿಕ್ಕಿ ಹೊಡೆದ ಆಘಾತಕಾರಿ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಆನೆಯ ದಂತವೇ ಮುರಿದು ಬಿದ್ದಿದ್ದು, ಗಾಯಗೊಂಡ ಆನೆ ಕಿರುಚುತ್ತಾ ಕಾಡಿನೊಳಗೆ ಓಡಿಹೋಗಿದೆ.

ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಖತಿಮಾದ ‘ಹಿಂದ್ ಪಬ್ಲಿಕ್ ಸ್ಕೂಲ್’ನ ಶಿಕ್ಷಕಿ ನಿಕಿತಾ ಕಪ್ರಿ ಎಂದು ಗುರುತಿಸಲಾಗಿದೆ. ನಿಕಿತಾ ಅವರು ತನಕ್ಪುರದಲ್ಲಿದ್ದ ತಮ್ಮ ತಾಯಿಯ ಸಂಬಂಧಿಕರ ಮನೆಗೆ ಹೋಗಿ, ಮಂಗಳವಾರ ಬೆಳಿಗ್ಗೆ (ಮೇ 19) ಸ್ಕೂಟರ್‌ನಲ್ಲಿ ವಾಪಸ್ ಬರುತ್ತಿದ್ದರು. ಬನ್ಬಾಸಾ ಮತ್ತು ಚಕರ್ಪುರ ನಡುವಿನ ದಟ್ಟ ಅರಣ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ, ಆನೆ ಕಾರಿಡಾರ್‌ (Elephant Corridor) ವಲಯದಲ್ಲಿ ಆನೆಯೊಂದು ಇದ್ದಕ್ಕಿದ್ದಂತೆ ರಸ್ತೆಗೆ ಬಂದಿದೆ. ಹಠಾತ್ ಆನೆಯನ್ನು ಕಂಡು ಗಾಬರಿಗೊಂಡ ಶಿಕ್ಷಕಿ, ಸ್ಕೂಟರ್ ನಿಯಂತ್ರಣ ಸಿಗದೆ ನೇರವಾಗಿ ಆನೆಗೆ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಮೊಬೈಲ್​ನಲ್ಲಿ ಗೇಮ್ ಆಡದಂತೆ ತಂದೆ ತಡೆದಿದ್ದಕ್ಕೆ ಮನೆಬಿಟ್ಟು ಹೋದ ಮೂವರು ಮಕ್ಕಳು

ಇಲ್ಲಿದೆ ನೋಡಿ ವೈರಲ್​ ವಿಡಿಯೋ:

ಅಪಘಾತದ ತೀವ್ರತೆಗೆ ಶಿಕ್ಷಕಿ ನಿಕಿತಾ ಅವರಿಗೂ ಗಂಭೀರ ಗಾಯಗಳಾಗಿದ್ದು, ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ (Forest Department) ಅಧಿಕಾರಿಗಳು ಹೆದ್ದಾರಿಯಲ್ಲಿ ಬಿದ್ದಿದ್ದ ಆನೆಯ ಮುರಿದ ದಂತವನ್ನು ವಶಕ್ಕೆ ಪಡೆದು ಕಚೇರಿಯಲ್ಲಿ ಸುರಕ್ಷಿತವಾಗಿಟ್ಟಿದ್ದಾರೆ. ದಂತ ಮುರಿದುಕೊಂಡು ನೋವಿನಿಂದ ಕಾಡಿಗೆ ಓಡಿರುವ ಆನೆಯ ಆರೋಗ್ಯದ ಮೇಲೆ ನಿಗಾ ಇಡಲು ಅರಣ್ಯ ಸಿಬ್ಬಂದಿ ಕಾಡಿನೊಳಗೆ ಎರಡು ‘ಟ್ರ್ಯಾಪ್ ಕ್ಯಾಮೆರಾ’ಗಳನ್ನು (Trap Cameras) ಅಳವಡಿಸಿದ್ದಾರೆ. ಸದ್ಯ ಈ ಅಪಘಾತದ ನಂತರದ ಭೀಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅರಣ್ಯ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಚಾಲಕರಿಗೆ ಮನವಿ ಮಾಡಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ