ಉತ್ತರಾಖಂಡ: 100 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್, ಐವರು ಸಾವು, 17ಕ್ಕೂ ಅಧಿಕ ಮಂದಿಗೆ ಗಾಯ
ಬಸ್ ನೂರು ಅಡಿ ಆಳದ ಕಂದಕಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದು, 17ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ 22 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್ ಪ್ರದೇಶದಲ್ಲಿರುವ ದಹಲ್ಚೋರಿಯಲ್ಲಿ ಅಪಘಾತಕ್ಕೀಡಾಯಿತು.
ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ 22 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್ ಪ್ರದೇಶದಲ್ಲಿರುವ ದಹಲ್ಚೋರಿಯಲ್ಲಿ ಅಪಘಾತಕ್ಕೀಡಾಯಿತು.
ಅಪಘಾತದ ಬಳಿಕ ಪೌರಿಯ ಜಿಲ್ಲಾ ನಿಯಂತ್ರಣ ಕೊಠಡಿಯು ಎಸ್ಡಿಆರ್ಎಫ್ಗೆ ಮಾಹಿತಿ ನೀಡಿದ ಬಳಿಕ ತಂಡವು ಅಪಘಾತ ಸ್ಥಳಕ್ಕೆ ಕೂಡಲೇ ಧಾವಿಸಿತ್ತು. ಅಪಘಾತ ಸಂಭವಿಸಿದಾಗ ಬಸ್ ಪೌರಿಯಿಂದ ದಹಚೋರಿಗೆ ಪ್ರಯಾಣಿಸುತ್ತಿತ್ತು ಎಂದು ಹೇಳಿದರು. ಪೌರಿ ಪೊಲೀಸರು ಮತ್ತು ಸ್ಥಳೀಯ ಜನರು ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.
VIDEO | Uttarakhand: Five people feared dead as bus meets with an accident in Pauri. More details awaited.
(Full video available on PTI Videos – https://t.co/n147TvqRQz) pic.twitter.com/F9RQzVuvpP
— Press Trust of India (@PTI_News) January 12, 2025
ಪರಿಣಾಮವಾಗಿ, ಒಟ್ಟು 17 ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ತಿಳಿಸಿದ್ದಾರೆ. ಸುಮಾರು 10 ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ, 7-8 ರೋಗಿಗಳನ್ನು ಪೌರಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತಷ್ಟು ಓದಿ: ನಾಸಿಕ್: ಕಬ್ಬಿಣದ ರಾಡ್ಗಳನ್ನು ಸಾಗಿಸುತ್ತಿದ್ದ ಲಾರಿಗೆ ಟೆಂಪೋ ಡಿಕ್ಕಿ, 8 ಮಂದಿ ಸಾವು, ಹಲವರಿಗೆ ಗಾಯ
ಈ ಘಟನೆ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು,ಪೌರಿಯ ಕೇಂದ್ರೀಯ ವಿದ್ಯಾಲಯಕ್ಕೆ ತೆರಳುವ ಮಾರ್ಗದಲ್ಲಿ ಬಸ್ ಅಪಘಾತದಲ್ಲಿ ಐವರು ಸಾವನ್ನಪ್ಪಿರುವುದು ದುಃಖದ ಸಂಗತಿ, ದೇವರು ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆದುಃಖಿತ ಕುಟುಂಬಕ್ಕೆ ಈ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸಿದರು.ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ