ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ.

ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ: ಉತ್ತರಾಖಂಡ ಹಿಮಕುಸಿತದ ತೀವ್ರತೆ ವಿವರಿಸಿದ ಸ್ಥಳೀಯ
ಹಾನಿಗೊಳಗಾದ ಡ್ಯಾಮ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 6:59 PM

ಡೆಹ್ರಾಡೂನ್ : ಉತ್ತರಾಖಂಡದನ ಚಮೋಲಿ ಜಿಲ್ಲೆಯಲ್ಲಿ ವ್ಯಾಪಕ ಹಿಮಕುಸಿತ (Uttarakhand Glacier Burst) ಉಂಟಾಗಿದೆ. ಇದರಿಂದ ಉಂಟಾದ ಪ್ರವಾಹದಿಂದ 150ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ. ಅನೇಕರ ಶವ ಈಗಾಗಲೇ ದೊರೆತಿದ್ದು, ಇನ್ನೂ ಅನೇಕರಿಗಾಗಿ ಹುಡುಕಾಟ ಮುಂದುವರಿದೆ.  ಕೆಲ ಗ್ರಾಮಗಳಿಗೆ ನೀರು ಅಪ್ಪಳಿಸಿದೆ. ಈ ಘಟನೆಯನ್ನು ಕಣ್ಣಾರೆ ಕಂಡ ವ್ಯಕ್ತಿಯೋರ್ವ ಭಯಾನಕ ದೃಶ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಉತ್ತರಾಖಂಡದಲ್ಲಿ ವಾಸಿಸುವ ಸಂಜಯ್​ ಸಿಂಗ್​ ರಾಣಾ ಎನ್ನುವ ವ್ಯಕ್ತಿ ಈ ಭಯಾನಕ ದೃಶ್ಯವನ್ನು ಕಣ್ಣಾರೆ ಕಂಡಿದ್ದಾರೆ. ಅವರು ಈ ಬಗ್ಗೆ ವಿವರಣೆ ನೀಡಿದ್ದಾರೆ. ನಾನು ಪ್ರವಾಹ ಉಂಟಾಗುವ ಪ್ರದೇಶಕ್ಕಿಂತ ಮೇಲಿದ್ದೆ. ನೋಡ ನೋಡುತ್ತಿದ್ದಂತೆ ಭಾರೀ ನೀರು ಬಂದಿತ್ತು. ಯಾರಿಗೂ ಅಲರ್ಟ್​ ಮಾಡಲು ಸಾಧ್ಯವೇ ಆಗಲಿಲ್ಲ. ನೀರು ಬರುವ ವೇಗ ನೋಡಿದರೆ, ನಾವು ಕೊಚ್ಚಿ ಹೋಗುತ್ತೇವೆ ಎಂದು ಭಾವಿಸಿದ್ದೆ ಎಂದು ಸಂಜಯ್ ಸಿಂಗ್​ ವಿವರಿಸಿದ್ದಾರೆ.

ನೀರು ಬರುವುದಕ್ಕೂ ಮೊದಲು ಇಲ್ಲಿ ಅನೇಕು ತಾವು ಸಾಕಿದ ಕುರಿ-ದನಗಳನ್ನು ಮೇಯಿಸುತ್ತಿದ್ದರು. ಇನ್ನೂ ಅನೇಕರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅವರೆಲ್ಲರೂ ಕೊಚ್ಚಿ ಹೋಗಿರುವ ಭಯ ಕಾಡುತ್ತಿದೆ. ಎಷ್ಟು ಜನ ಕಾಣೆ ಆಗಿದ್ದಾರೆ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಭಯಾನಕ ದೃಶ್ಯವನ್ನು ಶಬ್ದಗಳಲ್ಲಿ ಹೇಳುವದೇ ಕಷ್ಟ ಎಂದಿದ್ದಾರೆ ಸಂಜಯ್ ಸಿಂಗ್.

ಈಗಾಗಲೇ ಉತ್ತರಾಖಂಡದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ನೀರು ಬರುವ ವೇಗ ಎಲ್ಲರನ್ನು ಬೆಚ್ಚಿ ಬೀಳಿಸುವಂತಿದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ