ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇದ್ದ ಕಾರು ಅಪಘಾತ, ಎದೆಗೆ ಪೆಟ್ಟು

|

Updated on: Oct 25, 2023 | 9:43 AM

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಎದೆಗೆ ಪೆಟ್ಟು ಬಿದ್ದಿದೆ. ಆರಂಭಿಕ ವರದಿಗಳ ಪ್ರಕಾರ, ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಧಿಕಾರಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಮತ್ತು ಇತರ ಸಹಚರರಿಗೂ ಗಾಯಗಳಾಗಿವೆ. ಅವರ ಕೈ ಮತ್ತು ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇದ್ದ ಕಾರು ಅಪಘಾತ, ಎದೆಗೆ ಪೆಟ್ಟು
ಹರೀಶ್ ರಾವತ್
Image Credit source: The Economic Times
Follow us on

ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಅವರು ಪ್ರಯಾಣಿಸುತ್ತಿದ್ದ ಕಾರು ಬುಧವಾರ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ಎದೆಗೆ ಪೆಟ್ಟು ಬಿದ್ದಿದೆ. ಆರಂಭಿಕ ವರದಿಗಳ ಪ್ರಕಾರ, ಹಲ್ದ್ವಾನಿಯಿಂದ ಕಾಶಿಪುರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಧಿಕಾರಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರಾವತ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ (ಪಿಎಸ್‌ಒ) ಮತ್ತು ಇತರ ಸಹಚರರಿಗೂ ಗಾಯಗಳಾಗಿವೆ. ಅವರ ಕೈ ಮತ್ತು ತಲೆಗೆ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.

ತಕ್ಷಣವೇ ರಾವತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ವೈದ್ಯರು ಸಿಟಿ ಸ್ಕ್ಯಾನ್ ಮತ್ತು ಇತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದರು, ನಂತರ ಅವರು ರಾವತ್ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ರಾವತ್ ಅವರು ಪತ್ರಿಕಾಗೋಷ್ಠಿಗಾಗಿ ಕಾಶಿಪುರಕ್ಕೆ ತೆರಳುತ್ತಿದ್ದರು, ರಾವತ್‌ಗೆ ಗಂಭೀರ ಗಾಯಗಳಾಗಿದ್ದು, ಅವರ ಚಾಲಕ ಮತ್ತು ಗನ್ನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತಷ್ಟು ಓದಿ: ಉತ್ತರಾಖಂಡ: ನದಿಗೆ ಕಾರು ಉರುಳಿ, ಕರ್ನಾಟಕದ ಇಬ್ಬರು ಸೇರಿ ಒಟ್ಟು 6 ಮಂದಿ ಸಾವು

ಮಧ್ಯರಾತ್ರಿ 12.15ರ ಸುಮಾರಿಗೆ ಅಪಘಾತ ಸಂಭವಿಸಿದೆ, ಬಳಿಕ ರಾವತ್​ಗೆ ಎದೆನೋವು ಕಾಣಿಸಿಕೊಂಡಿತ್ತು. ರಾವತ್ ಅವರ ಸಿಒ ಭೂಪೇಂದ್ರ ಸಿಂಗ್ ಭಂಡಾರಿ ಅವರನ್ನು ತಮ್ಮ ಕಾರಿನಲ್ಲಿ ಕಾಶಿಪುರದ ಕೆವಿಆರ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಚಿಕಿತ್ಸೆ ಬಳಿಕ ಮಾಜಿ ಸಿಎಂ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ