AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ

Uttarakhand Glacier Burst ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದಾಗಿ ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

Uttarakhand Glacier Burst: ಧೌಲಿಗಂಗಾ ಪ್ರವಾಹ; 9 ಮೃತದೇಹ ಪತ್ತೆ, ಆಪತ್ತಿನಲ್ಲಿ 150ಕ್ಕೂ ಹೆಚ್ಚು ಜನ
ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಉಂಟಾಗಿರುವ ಪ್ರವಾಹ
Lakshmi Hegde
| Edited By: |

Updated on:Feb 07, 2021 | 7:10 PM

Share

ಡೆಹ್ರಾಡೂನ್​: ಉತ್ತರಾಖಂಡ್​ನ ಚಮೋಲಿ ಜಿಲ್ಲೆಯ ತಪೋವನ ಸಮೀಪದ ರೈಣಿ ಗ್ರಾಮದಲ್ಲಿ ನಂದಾದೇವಿ ಹಿಮಪರ್ವತ ಕುಸಿದ ಪರಿಣಾಮ ಧೌಲಿಗಂಗಾ ನದಿ ಪ್ರವಾಹ ಹೆಚ್ಚಾಗಿದ್ದು, ಸುತ್ತಮುತ್ತಲೂ ಅಪಾರ ಪ್ರಮಾಣದಲ್ಲಿ ಹಾನಿಯನ್ನುಂಟು ಮಾಡಿದೆ. ಪ್ರವಾಹದಲ್ಲಿ 100ರಿಂದ 150 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ 16 ಜನರನ್ನು ರಕ್ಷಿಸಲಾಗಿದೆ. 9 ಮಂದಿಯ ಮೃತದೇಹಗಳು ಪತ್ತೆಯಾಗಿವೆ.

200ಕ್ಕೂ ಹೆಚ್ಚು ಐಟಿಬಿಪಿ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಭಾರತೀಯ ವಾಯುಸೇನೆ (IAF) ಸಿಬ್ಬಂದಿಯೂ ನಂದಾದೇವಿ ಪರ್ವತದ ಬಳಿ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಋಷಿಗಂಗಾದ ಸುರಂಗದಲ್ಲಿ ಸುಮಾರು 50 ಮಂದಿ ಸಿಲುಕಿದ್ದು, ಎಲ್ಲರೂ ಪ್ರಾಣಭಯದಲ್ಲಿಯೇ ಇದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡ, ಇಂಜಿನಿಯರ್​ ಟಾಸ್ಕ್​ಫೋರ್ಸ್​ ತಂಡವೂ ಇದೆ.

ಮೊದಲು ಮಾಹಿತಿ ಕೊಟ್ಟಿದ್ದು ಹೆಡ್​ ಕಾನ್​ಸ್ಟೆಬಲ್ ಇಂದು ರೈಣಿ ಗ್ರಾಮದ ಬಳಿ ಹಿಮಕುಸಿತ ಆಗುತ್ತಿರುವ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದು, ಜೋಶಿಮಠ್​ದ ಹೆಡ್​​ಕಾನ್​ಸ್ಟೆಬಲ್​ ಒಬ್ಬರು ಎಂದು ಎಸ್​ಡಿಆರ್​ಎಫ್​ ಮೂಲಗಳೂ ತಿಳಿಸಿವೆ. ನಂದಾದೇವಿ ಪರ್ವತದಲ್ಲಿ ಎರಡು ದಿನಗಳ ಹಿಂದಿನಿಂದಲೇ ಹಿಮಪಾತ ಶುರುವಾಗಿತ್ತು ಎಂದೂ ಆ ಕಾನ್​ಸ್ಟೆಬಲ್​ ತಿಳಿಸಿದ್ದಾರೆ.

ಸಹಾಯವಾಣಿ ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರದ ಸಂಪರ್ಕ ಸಂಖ್ಯೆಗಳು: 1070 ಮತ್ತು 95574 44486.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 4:18 pm, Sun, 7 February 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ