Uttarakhand Glacier Burst: ಇಡೀ ದೇಶ ಉತ್ತರಾಖಂಡ್ ರಾಜ್ಯದ ಜನರ ಜೊತೆಗಿದೆ: ಪ್ರಧಾನಿ ನರೇಂದ್ರ ಮೋದಿ ಟ್ವೀಟ್

Uttarakhand Glacier Burst ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲಿನ ಜನರ ಸುರಕ್ಷತೆಗಾಗಿ ದೇಶವೇ ಪ್ರಾರ್ಥಿಸುತ್ತಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಬಗ್ಗೆ ಅವಲೋಕಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ, ನೆರವು ಕಾರ್ಯಾಚರಣೆ ನಡೆಯುತ್ತಿದೆ.

Uttarakhand Glacier Burst: ಇಡೀ ದೇಶ ಉತ್ತರಾಖಂಡ್ ರಾಜ್ಯದ ಜನರ ಜೊತೆಗಿದೆ: ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಉತ್ತರಾಖಂಡ್ ದುರ್ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದಾರೆ
Follow us
TV9 Web
| Updated By: ganapathi bhat

Updated on:Apr 06, 2022 | 8:11 PM

ಡೆಹ್ರಾಡೂನ್: ಉತ್ತರಾಖಂಡ್‌ ಚಮೋಲಿಯ ರೈಣಿ ಎಂಬಲ್ಲಿ ನಡೆದ ಹಿಮ ಕುಸಿತ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದೇನೆ. ಇಡೀ ದೇಶ ಉತ್ತರಾಖಂಡ್ ರಾಜ್ಯದ ಜನರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲಿನ ಜನರ ಸುರಕ್ಷತೆಗಾಗಿ ದೇಶವೇ ಪ್ರಾರ್ಥಿಸುತ್ತಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಬಗ್ಗೆ ಅವಲೋಕಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ, ನೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ಘಟನೆಯ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ವಿಚಾರವಾಗಿ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಉತ್ತರಾಖಂಡ್‌ಗೆ ಎಲ್ಲಾ ರೀತಿಯ ಸಹಕಾರವನ್ನು ಕೊಡುತ್ತೇವೆ. ಎನ್‌ಡಿಆರ್‌ಎಫ್‌ನ 3 ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಶಾ ತಿಳಿಸಿದ್ದಾರೆ.

ಉತ್ತರಾಖಂಡ್​ನಲ್ಲಿ ಕೈಗೊಂಡಿರುವ ರಕ್ಷಣಾ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಎಲ್ಲಾ ರೀತಿಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ನದಿ ಪಾತ್ರದ ಗ್ರಾಮಸ್ಥರನ್ನು ತೆರವುಗೊಳಿಸಲಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಉತ್ತರಾಖಂಡದ ಜೋಶಿಮಠ್​ ಬಳಿಯ ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಜನರ ಯೋಗಕ್ಷೇಮ, ಸುರಕ್ಷತೆಗಾಗಿ ಪ್ರಾರ್ಥಿಸೋಣ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ತ್ವರಿತವಾಗಿ ನಡೆಸಬೇಕಿದೆ ಎಂದು ಕೋವಿಂದ್ ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಟ್ವೀಟ್​

ಹಿಮಕುಸಿತದಿಂದ ಹಾನಿಯಾಗಿರುವ ಉತ್ತರಾಖಂಡ್​ನ ಜೋಷಿಮಠ್‌ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.

ಚಮೋಲಿ ಜಿಲ್ಲೆಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭೇಟಿ

ಹಿಮಕುಸಿತದ ಬಗ್ಗೆ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ. ಹಿಮ ಕುಸಿತ, ಪ್ರವಾಹದ ದೃಶ್ಯ ನೋಡಿ ಆತಂಕವಾಗಿದೆ. ಹಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪ್ರವಾಹ ಪರಿಸ್ಥಿತಿಗೆ ಒಳಗಾದವರ ಜತೆ ನಾವಿದ್ದೇವೆ ಎಂದು ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಟ್ವೀಟ್

ಹಿಮಕುಸಿತದಿಂದ ಉತ್ತರಾಖಂಡ್‌ನಲ್ಲಿ ಪ್ರವಾಹವಾದದ್ದು ದುರದೃಷ್ಟಕರ. ಎಲ್ಲರೂ ಸುರಕ್ಷಿತವಾಗಿರಲೆಂದು ಪ್ರಾರ್ಥಿಸುವೆ. ಈ ಸಂದರ್ಭದಲ್ಲಿ ಅಲ್ಲಿನ ಜನರು ಧೈರ್ಯಶಾಲಿಗಳಾಗಿರಬೇಕು. ಉತ್ತರಾಖಂಡ್ ಶೀಘ್ರವಾಗಿ ಸಹಜಸ್ಥಿತಿಗೆ ಮರಳಲು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್ 

ಉತ್ತರಾಖಂಡ್​ನಲ್ಲಿ ನಡೆದ ದುರ್ಘಟನೆಯಿಂದ ಬಹಳ ಬೇಸರವಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 4:22 pm, Sun, 7 February 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್