ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿಯ ರೈಣಿ ಎಂಬಲ್ಲಿ ನಡೆದ ಹಿಮ ಕುಸಿತ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದೇನೆ. ಇಡೀ ದೇಶ ಉತ್ತರಾಖಂಡ್ ರಾಜ್ಯದ ಜನರ ಜೊತೆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಹಿಮ ಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲಿನ ಜನರ ಸುರಕ್ಷತೆಗಾಗಿ ದೇಶವೇ ಪ್ರಾರ್ಥಿಸುತ್ತಿದೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ಬಗ್ಗೆ ಅವಲೋಕಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ, ನೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ಘಟನೆಯ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್
Am constantly monitoring the unfortunate situation in Uttarakhand. India stands with Uttarakhand and the nation prays for everyone’s safety there. Have been continuously speaking to senior authorities and getting updates on NDRF deployment, rescue work and relief operations.
— Narendra Modi (@narendramodi) February 7, 2021
ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ವಿಚಾರವಾಗಿ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಉತ್ತರಾಖಂಡ್‌ಗೆ ಎಲ್ಲಾ ರೀತಿಯ ಸಹಕಾರವನ್ನು ಕೊಡುತ್ತೇವೆ. ಎನ್‌ಡಿಆರ್‌ಎಫ್‌ನ 3 ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಶಾ ತಿಳಿಸಿದ್ದಾರೆ.
ಉತ್ತರಾಖಂಡ್‌ನಲ್ಲಿ ಕೈಗೊಂಡಿರುವ ರಕ್ಷಣಾ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಹೇಳಿಕೆ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಎಲ್ಲಾ ರೀತಿಯ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ನದಿ ಪಾತ್ರದ ಗ್ರಾಮಸ್ಥರನ್ನು ತೆರವುಗೊಳಿಸಲಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಉತ್ತರಾಖಂಡದ ಜೋಶಿಮಠ್ ಬಳಿಯ ಘಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲಿನ ಜನರ ಯೋಗಕ್ಷೇಮ, ಸುರಕ್ಷತೆಗಾಗಿ ಪ್ರಾರ್ಥಿಸೋಣ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ತ್ವರಿತವಾಗಿ ನಡೆಸಬೇಕಿದೆ ಎಂದು ಕೋವಿಂದ್ ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್
Deeply worried about the glacier burst near Joshimath, Uttarakhand, that caused destruction in the region. Praying for well being and safety of people. Am confident that rescue and relief operations on ground are progressing well.
— President of India (@rashtrapatibhvn) February 7, 2021
ಹಿಮಕುಸಿತದಿಂದ ಹಾನಿಯಾಗಿರುವ ಉತ್ತರಾಖಂಡ್‌ನ ಜೋಷಿಮಠ್‌ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ.
ಚಮೋಲಿ ಜಿಲ್ಲೆಗೆ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭೇಟಿ
Uttarakhand Chief Minister Trivendra Singh Rawat being briefed on flood situation by Army and ITBP jawans, in Tapovan area of Chamoli district. pic.twitter.com/uBraBzSFzJ
— ANI (@ANI) February 7, 2021
ಹಿಮಕುಸಿತದ ಬಗ್ಗೆ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ. ಹಿಮ ಕುಸಿತ, ಪ್ರವಾಹದ ದೃಶ್ಯ ನೋಡಿ ಆತಂಕವಾಗಿದೆ. ಹಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಪ್ರವಾಹ ಪರಿಸ್ಥಿತಿಗೆ ಒಳಗಾದವರ ಜತೆ ನಾವಿದ್ದೇವೆ ಎಂದು ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಟ್ವೀಟ್
Disturbed to see the visuals of glacier burst in Chamoli district, Uttarakhand, and reports of destruction and several people missing. My thoughts and prayers are with those affected.
— B.S.Yediyurappa (@BSYBJP) February 7, 2021
ಹಿಮಕುಸಿತದಿಂದ ಉತ್ತರಾಖಂಡ್‌ನಲ್ಲಿ ಪ್ರವಾಹವಾದದ್ದು ದುರದೃಷ್ಟಕರ. ಎಲ್ಲರೂ ಸುರಕ್ಷಿತವಾಗಿರಲೆಂದು ಪ್ರಾರ್ಥಿಸುವೆ. ಈ ಸಂದರ್ಭದಲ್ಲಿ ಅಲ್ಲಿನ ಜನರು ಧೈರ್ಯಶಾಲಿಗಳಾಗಿರಬೇಕು. ಉತ್ತರಾಖಂಡ್ ಶೀಘ್ರವಾಗಿ ಸಹಜಸ್ಥಿತಿಗೆ ಮರಳಲು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್
Floods in Uttarakhand due to Glacial burst is unfortunate. I hope all are safe & the disruption is minimal.
I pray for speedy return to normalcy and request the people of Uttarakhand to be brave in this hour of disaster.#Uttarakhand
— Siddaramaiah (@siddaramaiah) February 7, 2021
ಉತ್ತರಾಖಂಡ್‌ನಲ್ಲಿ ನಡೆದ ದುರ್ಘಟನೆಯಿಂದ ಬಹಳ ಬೇಸರವಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್ ಮಾಡಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಟ್ವೀಟ್
Distressed by the tragic disaster that unfolded in #Uttarakhand. Praying for everyone’s safety. Hope those stranded or missing are rescued and brought home safe soon.
— Jyotiraditya M. Scindia (@JM_Scindia) February 7, 2021
ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ
Published On - 4:22 pm, Sun, 7 February 21