Uttarakhand Glacier Burst: ಸಹಾಯವಾಣಿ ಆರಂಭ, ಧೌಲಿಗಂಗಾ ನದಿ ಪ್ರವಾಹಕ್ಕೆ ಸಿಲುಕಿರುವ ಜನರು ಈ ಸಂಖ್ಯೆಗೆ ಕರೆ ಮಾಡಿ

ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ.

Uttarakhand Glacier Burst: ಸಹಾಯವಾಣಿ ಆರಂಭ, ಧೌಲಿಗಂಗಾ ನದಿ ಪ್ರವಾಹಕ್ಕೆ ಸಿಲುಕಿರುವ ಜನರು ಈ ಸಂಖ್ಯೆಗೆ ಕರೆ ಮಾಡಿ
ಉತ್ತರಾಖಂಡ್ ಧೌಲಿಗಂಗಾ ನದಿ ಪ್ರವಾಹ
Follow us
| Updated By: ganapathi bhat

Updated on:Apr 06, 2022 | 8:11 PM

ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ಹಿಮಸ್ಫೋಟ ಸಂಭವಿಸಿದೆ. ಇದರಿಂದಾಗಿ ಧೌಲಿಗಂಗಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹರಿದ್ವಾರ, ಋಷಿಕೇಶ, ರುದ್ರಪ್ರಯಾಗ, ಕರ್ಣಪ್ರಯಾಗ ಮತ್ತು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹೈಅಲರ್ಟ್‌ ಘೋಷಣೆಯಾಗಿದೆ.

ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರ ಸಂಪರ್ಕ ಸಂಖ್ಯೆ: 1070 ಅಥವಾ 95574 44486

ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಟ್ವೀಟ್

ಈ ಬಗ್ಗೆ, ಉತ್ತರಾಖಂಡ್ ಮುಖ್ಯಮಂತ್ರಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಹಿಮಸ್ಫೋಟವಾದ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.

ಐಟಿಬಿಪಿಯ ಎರಡು ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ. 3 ಎನ್‌ಡಿಆರ್‌ಎಫ್ ತಂಡಗಳು ಡೆಹ್ರಾಡೂನ್‌ನಿಂದ ಆಗಮಿಸುತ್ತಿವೆ. ಹೆಚ್ಚುವರಿ 3 ತಂಡಗಳು ಸಂಜೆಯ ವೇಳೆಗೆ ಆಗಮಿಸಲಿವೆ. ಸದ್ಯ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ ಹಾಗೂ ಸ್ಥಳೀಯ ಸಿಬ್ಬಂದಿಗಳಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ.

ಉತ್ತರಾಖಂಡ್​ನಲ್ಲಿ ಹಿಮಕುಸಿತದಿಂದ ದಿಢೀರ್ ಪ್ರವಾಹ ಉಂಟಾಗಿದೆ. ಋಷಿ ಗಂಗಾ ಯೋಜನೆಯ ಪವರ್ ಪ್ರಾಜೆಕ್ಟ್​ಗೂ ಹಾನಿಯಾಗಿದೆ. ಅಲಕಾನಂದಾ ನದಿ ಪಾತ್ರದ ಗ್ರಾಮಗಳು ಮುಳುಗುವ ಭೀತಿ ಎದುರಿಸುತ್ತಿವೆ. ನದಿ ಪಾತ್ರದ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ಚಮೋಲಿ ಪೊಲೀಸರಿಂದ ಗ್ರಾಮಸ್ಥರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

Published On - 2:09 pm, Sun, 7 February 21

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ