ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ರೈಣಿನಲ್ಲಿ ಹಿಮನದಿ ಸ್ಪೋಟಗೊಂಡಿದೆ. ಹಿಮನದಿ ಸ್ಪೋಟದಿಂದಾಗಿ ಧೌಲಿ ನದಿಯು ಪ್ರವಾಹಕ್ಕೆ ಸಿಲುಕಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉತ್ತರಾಖಂಡ್ ಚಮೋಲಿಯಲ್ಲಿ ವ್ಯಾಪಕ ಹಿಮಕುಸಿತ; ನದಿಪಾತ್ರದ ಜನತೆಗೆ ಆಡಳಿತದಿಂದ ಎಚ್ಚರಿಕೆ
ನಾಶವಾದ ವಿದ್ಯುತ್​ ಶಕ್ತಿ ಯೋಜನೆ
Follow us
| Updated By: ganapathi bhat

Updated on:Apr 06, 2022 | 8:13 PM

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ವ್ಯಾಪಕ ಹಿಮಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಇದು ಹರಿದ್ವಾರಕ್ಕೆ ಅಪಾಯವನ್ನು ಹೆಚ್ಚಿಸಿದೆ ಎಂದೂ ಹೇಳಲಾಗುತ್ತಿದೆ. ಋಷಿ ಗಂಗಾ ಯೋಜನೆಯ ಪವರ್ ಪ್ರಾಜೆಕ್ಟ್​ಗೂ ಹಾನಿಯಾಗಿದೆ. ಅಲಕಾನಂದಾ ನದಿ ಪಾತ್ರದ ಗ್ರಾಮಗಳು ಮುಳುಗುವ ಭೀತಿ ಎದುರಿಸುತ್ತಿವೆ. ನದಿ ಪಾತ್ರದ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ಚಮೋಲಿ ಪೊಲೀಸರಿಂದ ಗ್ರಾಮಸ್ಥರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.

ಹಿಮನದಿ ಸ್ಫೋಟಗೊಂಡ ಮಾಹಿತಿ ಮೇರೆಗೆ ಆಡಳಿತ ತಂಡ ಸ್ಥಳಕ್ಕೆ ತೆರಳಿದೆ. ಪೊಲೀಸರು ಧ್ವನಿವರ್ಧಕದ ಮೂಲಕ ನದಿಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶವನ್ನು ನೀಡುತ್ತಿದ್ದಾರೆ. ಚಮೋಲಿ ಜಿಲ್ಲೆಯಲ್ಲಿ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗುತ್ತಿದೆ. ಕರ್ಣ​ಪ್ರಯಾಗ್​ನಲ್ಲಿ, ಅಲಕಾನಂದ ನದಿ ತಟದಲ್ಲಿ ವಾಸವಿರುವ ಜನರು ಮನೆ ಖಾಲಿ ಮಾಡಲು ತೊಡಗಿದ್ದಾರೆ. ಧೌಲಿಗಂಗಾ ನದಿ ಪ್ರವಾಹದಿಂದ ಹಲವು ಮನೆಗೆ ಹಾನಿಯಾಗಿದೆ. ಋಷಿಗಂಗಾ ಪವರ್ ಪ್ರಾಜೆಕ್ಟ್‌ಗೂ ಹಾನಿಯಾಗಿದೆ. ಈವರೆಗೆ ಸುಮಾರು 150 ಜನ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಜೊತೆಗೆ, 2 ಸೇತುವೆಗಳು ಕೊಚ್ಚಿಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಹಿಮಸ್ಪೋಟಕ್ಕೆ ತುತ್ತಾಗಿ ಹಲವು ಕಾರ್ಮಿಕರು ಕೊಚ್ಚಿಹೋಗಿರುವ ಬಗ್ಗೆ ಅನುಮಾನ ಉಂಟಾಗಿದೆ. ಸ್ಥಳಕ್ಕೆ ಎಸ್‌ಡಿಆರ್‌ಎಫ್, ಐಟಿಬಿಪಿ ಸಿಬ್ಬಂದಿ‌ ಆಗಮಿಸಿದ್ದಾರೆ. ನದಿಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಘಟನಾ ಸ್ಥಳಕ್ಕೆ ತೆರಳುತ್ತಿದ್ದಾರೆ. ಹರಿದ್ವಾರ, ಋಷಿಕೇಶ, ರುದ್ರಪ್ರಯಾಗ, ಕರ್ಣಪ್ರಯಾಗ ಮತ್ತು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹೈಅಲರ್ಟ್‌ ಘೋಷಣೆಯಾಗಿದೆ.

ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರ ಸಂಪರ್ಕ ಸಂಖ್ಯೆ: 1070 ಅಥವಾ 9557444486

ಉತ್ತರಾಖಂಡ್ ಮುಖ್ಯಮಂತ್ರಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಹಿಮಸ್ಫೋಟವಾದ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.

ಐಟಿಬಿಪಿಯ ಎರಡು ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ. 3 ಎನ್‌ಡಿಆರ್‌ಎಫ್ ತಂಡಗಳು ಡೆಹ್ರಾಡೂನ್‌ನಿಂದ ಆಗಮಿಸುತ್ತಿವೆ. ಹೆಚ್ಚುವರಿ 3 ತಂಡಗಳು ಸಂಜೆಯ ವೇಳೆಗೆ ಆಗಮಿಸಲಿವೆ. ಸದ್ಯ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ ಹಾಗೂ ಸ್ಥಳೀಯ ಸಿಬ್ಬಂದಿಗಳಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ.

ಧೌಲಿಗಂಗಾ ನದಿಮಟ್ಟ ಏರಿಕೆ

ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್​ ಕಾರ್ಪ್ಸ್​ ಯೋಧರು

Published On - 12:31 pm, Sun, 7 February 21

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ