ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯ ರೈಣಿ ಗ್ರಾಮದಲ್ಲಿ ವ್ಯಾಪಕ ಹಿಮಕುಸಿತದಿಂದ ಧೌಲಿಗಂಗಾ ನದಿಯಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಇದು ಹರಿದ್ವಾರಕ್ಕೆ ಅಪಾಯವನ್ನು ಹೆಚ್ಚಿಸಿದೆ ಎಂದೂ ಹೇಳಲಾಗುತ್ತಿದೆ. ಋಷಿ ಗಂಗಾ ಯೋಜನೆಯ ಪವರ್ ಪ್ರಾಜೆಕ್ಟ್‌ಗೂ ಹಾನಿಯಾಗಿದೆ. ಅಲಕಾನಂದಾ ನದಿ ಪಾತ್ರದ ಗ್ರಾಮಗಳು ಮುಳುಗುವ ಭೀತಿ ಎದುರಿಸುತ್ತಿವೆ. ನದಿ ಪಾತ್ರದ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ಚಮೋಲಿ ಪೊಲೀಸರಿಂದ ಗ್ರಾಮಸ್ಥರ ಸ್ಥಳಾಂತರ ಕಾರ್ಯ ನಡೆಯುತ್ತಿದೆ.
ಹಿಮನದಿ ಸ್ಫೋಟಗೊಂಡ ಮಾಹಿತಿ ಮೇರೆಗೆ ಆಡಳಿತ ತಂಡ ಸ್ಥಳಕ್ಕೆ ತೆರಳಿದೆ. ಪೊಲೀಸರು ಧ್ವನಿವರ್ಧಕದ ಮೂಲಕ ನದಿಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ ಸಂದೇಶವನ್ನು ನೀಡುತ್ತಿದ್ದಾರೆ. ಚಮೋಲಿ ಜಿಲ್ಲೆಯಲ್ಲಿ ಜನರು ಎಚ್ಚರ ವಹಿಸುವಂತೆ ಸೂಚಿಸಲಾಗುತ್ತಿದೆ. ಕರ್ಣಪ್ರಯಾಗ್ನಲ್ಲಿ, ಅಲಕಾನಂದ ನದಿ ತಟದಲ್ಲಿ ವಾಸವಿರುವ ಜನರು ಮನೆ ಖಾಲಿ ಮಾಡಲು ತೊಡಗಿದ್ದಾರೆ. ಧೌಲಿಗಂಗಾ ನದಿ ಪ್ರವಾಹದಿಂದ ಹಲವು ಮನೆಗೆ ಹಾನಿಯಾಗಿದೆ. ಋಷಿಗಂಗಾ ಪವರ್ ಪ್ರಾಜೆಕ್ಟ್‌ಗೂ ಹಾನಿಯಾಗಿದೆ. ಈವರೆಗೆ ಸುಮಾರು 150 ಜನ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಜೊತೆಗೆ, 2 ಸೇತುವೆಗಳು ಕೊಚ್ಚಿಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಿಮಸ್ಪೋಟಕ್ಕೆ ತುತ್ತಾಗಿ ಹಲವು ಕಾರ್ಮಿಕರು ಕೊಚ್ಚಿಹೋಗಿರುವ ಬಗ್ಗೆ ಅನುಮಾನ ಉಂಟಾಗಿದೆ. ಸ್ಥಳಕ್ಕೆ ಎಸ್‌ಡಿಆರ್‌ಎಫ್, ಐಟಿಬಿಪಿ ಸಿಬ್ಬಂದಿ ಆಗಮಿಸಿದ್ದಾರೆ. ನದಿಪಾತ್ರದ ಗ್ರಾಮಸ್ಥರನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಘಟನಾ ಸ್ಥಳಕ್ಕೆ ತೆರಳುತ್ತಿದ್ದಾರೆ. ಹರಿದ್ವಾರ, ಋಷಿಕೇಶ, ರುದ್ರಪ್ರಯಾಗ, ಕರ್ಣಪ್ರಯಾಗ ಮತ್ತು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹೈಅಲರ್ಟ್ ಘೋಷಣೆಯಾಗಿದೆ.
ಪ್ರವಾಹಕ್ಕೆ ಸಿಲುಕಿರುವ ಜನರು ಸಹಾಯಕ್ಕಾಗಿ ವಿಪತ್ತು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸುವಂತೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೂಚಿಸಿದ್ದಾರೆ. ವಿಪತ್ತು ನಿರ್ವಹಣಾ ಕೇಂದ್ರ ಸಂಪರ್ಕ ಸಂಖ್ಯೆ: 1070 ಅಥವಾ 9557444486
ಉತ್ತರಾಖಂಡ್ ಮುಖ್ಯಮಂತ್ರಿ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಹಿಮಸ್ಫೋಟವಾದ ಪ್ರದೇಶಗಳಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದಿದ್ದಾರೆ.
ಐಟಿಬಿಪಿಯ ಎರಡು ತಂಡಗಳು ಘಟನಾ ಸ್ಥಳಕ್ಕೆ ತೆರಳಿವೆ. 3 ಎನ್‌ಡಿಆರ್‌ಎಫ್ ತಂಡಗಳು ಡೆಹ್ರಾಡೂನ್‌ನಿಂದ ಆಗಮಿಸುತ್ತಿವೆ. ಹೆಚ್ಚುವರಿ 3 ತಂಡಗಳು ಸಂಜೆಯ ವೇಳೆಗೆ ಆಗಮಿಸಲಿವೆ. ಸದ್ಯ ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ಸಿಬ್ಬಂದಿಗಳಿದ್ದಾರೆ ಎಂದು ರಕ್ಷಣಾ ಕಾರ್ಯಾಚರಣೆ ಬಗ್ಗೆ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ.
ಧೌಲಿಗಂಗಾ ನದಿಮಟ್ಟ ಏರಿಕೆ
#WATCH | Water level in Dhauliganga river rises suddenly following avalanche near a power project at Raini village in Tapovan area of Chamoli district. #Uttarakhand pic.twitter.com/syiokujhns
— ANI (@ANI) February 7, 2021
ಹಿಮಪಾತವಾಗುತ್ತಿರುವ ದುರ್ಗಮ ಹಾದಿಯಲ್ಲಿ ತಾಯಿ-ನವಜಾತ ಶಿಶುವನ್ನು ಹೊತ್ತು ಸಾಗಿದ ಚಿನಾರ್ ಕಾರ್ಪ್ಸ್ ಯೋಧರು
Published On - 12:31 pm, Sun, 7 February 21