ಹೋಟೆಲ್ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರೊಫೆಸರ್ ಶವ ಪತ್ತೆ
ಹೋಟೆಲ್ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕರ ಶವ ಪತ್ತೆಯಾಗಿದೆ. ಪ್ರಾಧ್ಯಾಪಕರನ್ನು ಮೈನಕ್ ಪಾಲ್ ಎಂದು ಗುರುತಿಸಲಾಗಿದೆ. ಫಿಲಾಸಫಿ ವಿಭಾಗದ ಪ್ರೊಫೆಸರ್ ಮೈನಾಕ್ ಪಾಲ್ ಅವರ ರಕ್ತಸಿಕ್ತ ಶವ ನವೆಂಬರ್ 8 ರಂದು ವಾಶ್ ರೂಂನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಮತ್ತು ಕೈಗಳ ಮೇಲೆ ಆಳವಾದ ಗಾಯಗಳೊಂದಿಗೆ ಬಿದ್ದಿತ್ತು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪ್ರಾಥಮಿಕ ಶವಪರೀಕ್ಷೆ ವರದಿಯ ಆಧಾರದ ಮೇಲೆ, ಉತ್ತರಾಖಂಡ ಪೊಲೀಸರು ಆತ್ಮಹತ್ಯೆಯ ಸಾಧ್ಯತೆಯನ್ನು ತಳ್ಳಿಹಾಕಿಲ್ಲ, ಪ್ರಾಥಮಿಕ ಪೊಲೀಸ್ ಸಂವಹನಗಳಲ್ಲಿ ಸೂಚಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿವರವಾದ ವರದಿ ಬಾಕಿ ಇದೆ.
ಜಾದವ್‌ಪುರ ವಿಶ್ವವಿದ್ಯಾಲಯ ಶಿಕ್ಷಕರ ಸಂಘ (JUTA) ಪಾಲ್ ಅವರನ್ನು ಪ್ರತಿಭಾವಂತ ವ್ಯಕ್ತಿ ಎಂದು ಹೇಳಿದೆ. ವರು ಶಿಕ್ಷಕರಾಗಿ ಮತ್ತು ಸಂಶೋಧಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ, ಅವರ ಸಾವಿನ ಸುದ್ದಿ ಕೇಳಿ ನಾವು ತೀವ್ರ ಆಘಾತಕ್ಕೆ ಒಳಗಾಗಿದ್ದೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಪಾರ್ಥ ಪ್ರತಿಮ್ ರಾಯ್ ಹೇಳಿದ್ದಾರೆ.
ಭಾನುವಾರ ಸಂಜೆ ವೇಳೆಗೆ ಪ್ರಾಧ್ಯಾಪಕರ ಪಾರ್ಥಿವ ಶರೀರವನ್ನು ಕೋಲ್ಕತ್ತಾಕ್ಕೆ ತರಲಾಗಿತ್ತು. ಪಾಲ್ ಅವರು ಪ್ರೀತಿಯ ವ್ಯಕ್ತಿಯಾಗಿದ್ದರು ಮತ್ತು ವಿದ್ಯಾರ್ಥಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದರು. ಇಬ್ಬರು ಸ್ನೇಹಿತರೊಡನೆ ಉತ್ತರಾಖಂಡಕ್ಕೆ ಹೋಗಿದ್ದರು, ಶುಕ್ರವಾರ ಹಿಂದಿರುಗಲು ನಿರ್ಧರಿಸಿದ್ದರು.
ಜಾದವ್‌ಪುರ ವಿಶ್ವವಿದ್ಯಾನಿಲಯಕ್ಕೆ ಸೇರುವ ಮೊದಲು, ಪಾಲ್ ಎರಡು ಸರ್ಕಾರಿ ಕಾಲೇಜುಗಳಲ್ಲಿ ಮತ್ತು 2022 ರಲ್ಲಿ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ