AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ

Uttarakhand Politics Trivendra Singh Rawat: ಉತ್ತರಾಖಂಡದಲ್ಲಿ ಮುಂದಿನ ವರ್ಷ ಫೆಬ್ರುವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾವತ್ ಉತ್ತರಾಧಿಕಾರಿಯನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ.

ಶಾಸಕರಿಂದ ‘ಅಸಮರ್ಥ’ ಎನಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾಜೀನಾಮೆ
ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉಪೇಂದ್ರ ಸಿಂಗ್ ರಾವತ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 09, 2021 | 4:49 PM

ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ (ಮಾರ್ಚ್ 9) ಘೋಷಿಸಿದರು. ನಿನ್ನೆಯಷ್ಟೇ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ತ್ರಿವೇಂದ್ರ ಸಿಂಗ್​ ಭೇಟಿಯಾಗಿ ಚರ್ಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ರಾವತ್, ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ಕೆಲ ಸಮಯದ ಮೊದಲು ರಾಜೀನಾಮೆ ಪತ್ರ ಹಸ್ತಾಂತರಿಸಿದರು. ಉತ್ತರಾಖಂಡದಲ್ಲಿ ಮುಂದಿನ ವರ್ಷ ಫೆಬ್ರುವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾವತ್ ಉತ್ತರಾಧಿಕಾರಿಯನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ.

ತಮ್ಮದೇ ಪಕ್ಷದ ಶಾಸಕರಿಂದ ಅವರು ‘ಅಸಮರ್ಥ ಮುಖ್ಯಮಂತ್ರಿ’ (below average) ಎನಿಸಿಕೊಂಡಿದ್ದರು. ಇವರು ಮುಖ್ಯಮಂತ್ರಿಯಾಗಿ ಮುಂದುವರಿದರೆ ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಕಳಪೆ ಸಾಧನೆ ಮಾಡಬಹುದು ಎಂಬ ಆತಂಕ ಶಾಸಕರಿಂದ ವ್ಯಕ್ತವಾಗಿತ್ತು.

ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ತ್ರಿವೇಂದ್ರ ಸಿಂಗ್, ಉತ್ತರಾಖಂಡ ರಾಜಕಾರಣದ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ರಾವತ್ ಅವರ ಸ್ಥಾನ ತುಂಬಲಿರುವ ವ್ಯಕ್ತಿಯ ಬಗ್ಗೆಯೂ ಚರ್ಚೆ ನಡೆಯಿತು. ಉತ್ತರಾಖಂಡ ಸಂಪುಟದಲ್ಲಿ ಸಚಿವರಾಗಿರುವ ಧನ್ ಸಿಂಗ್ ರಾವತ್ ಮತ್ತು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಧನ್ ಸಿಂಗ್ ರಾವತ್ ಖಾಸಗಿ ಹೆಲಿಕಾಪ್ಟರ್​ನಲ್ಲಿ ಘರ್ವಾಲ್​ನಿಂದ ಡೆಹ್ರಾಡೂನ್​ಗೆ ಖಾಸಗಿ ಹೆಲಿಕಾಪ್ಟರ್​ನಲ್ಲಿ ಧಾವಿಸುತ್ತಿದ್ದಾರೆ. ಬಿಜೆಪಿಯ ಕೇಂದ್ರ ಸಮಿತಿ ನಿರೀಕ್ಷರಾದ ರಮಣ್ ಸಿಂಗ್ ಮತ್ತು ದುಶ್ಯಂತ್ ಗೌತಮ್ ಅವರು ಶನಿವಾರ ಉತ್ತರಾಖಂಡಕ್ಕೆ ಭೇಟಿ ನೀಡಿದ ನಂತರ ಚುನಾವಣೆಗೂ ಮುನ್ನ ಉತ್ತರಾಖಂಡದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಶಾಸಕರು, ಸಚಿವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರು ಮತ್ತು ಮುಖ್ಯಮಂತ್ರಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚಿಸಿದ ಕೇಂದ್ರ ಸಮಿತಿಯ ಸದಸ್ಯರು ಪಕ್ಷದ ಅಧ್ಯಕ್ಷರಿಗೆ ವರದಿ ಸಲ್ಲಿಸಿದ್ದರು.

ರಾವತ್ ನಾಯಕತ್ವ ಮುಂದುವರಿದರೆ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಬಹುತೇಕ ಶಾಸಕರು ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿದೆ. ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ರಾವತ್ ವಿಫಲರಾಗಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು.

ಹೆಚ್ಚು ಪ್ರಚಾರಕ್ಕೆ ಬಾರದ, ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಹೋಗುವ ಸ್ವಭಾವದ ತ್ರಿವೇಂದ್ರ ಸಿಂಗ್​ ರಾವತ್ ಅವರಿಗೆ ಈಗ ವರ್ಷ. ನಿಧಾನಗತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಅವರ ಪ್ರವೃತ್ತಿಯು ಪಕ್ಷದ ಹಿನ್ನಡೆಗೆ ಕಾರಣವಾಗಬಹುದು ಎಂದು ಬಿಜೆಪಿ ಶಾಸಕರು ಆತಂಕ ವ್ಯಕ್ತಪಡಿಸಿದ್ದರು. ಕೆಲ ಸಮೀಕ್ಷೆಗಳು ರಾವತ್ ಅವರ ಕಾರ್ಯನಿರ್ವಹಣೆಯು ಜನಪ್ರಿಯತೆ ಗಳಿಸಿಲ್ಲ ಎಂದು ಸಾರಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಪಕ್ಷದ ನಿರ್ಧಾರದಂತೆ ರಾಜೀನಾಮೆ ರಾಜ್ಯಕ್ಕೆ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಲು ಪಕ್ಷವು ನನಗೆ ಅವಕಾಶ ನೀಡಿತ್ತು. ನನಗೆ ಇಂಥ ಅವಕಾಶ ಸಿಗಬಹುದು ಎಂದು ನಾನೆಂದೂ ಭಾವಿಸಿರಲಿಲ್ಲ. ಇದೀಗ ಪಕ್ಷವು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಮತ್ತೊಬ್ಬರಿಗೆ ನೀಡಬೇಕು ಎಂದು ಚಿಂತನೆ ನಡೆಸಿದೆ ಎಂದು ರಾವತ್ ಡೆಹ್ರಾಡೂನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ ಕನ್ನಡಿಗನನ್ನು ರಕ್ಷಿಸಿದ ಯೋಧರು! ಈತ ಬೆಟಗೇರಿಯಿಂದ 25 ವರ್ಷ ಹಿಂದೆ ಊರುಬಿಟ್ಟು ಹೋಗಿದ್ದ..

ಇದನ್ನೂ ಓದಿ: ರಾಜಕೀಯ ವಿಶ್ಲೇಷಣೆ: ಮಧ್ಯಂತರ ಚುನಾವಣೆಗೆ ಹೋಗಲು ಜನಪ್ರಿಯ ಬಜೆಟ್ ಕೊಟ್ರಾ ಯಡಿಯೂರಪ್ಪ?

Published On - 4:41 pm, Tue, 9 March 21

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ