AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ್‌: ಕಣಿವೆಗೆ ಬಿದ್ದ ಖಾಸಗಿ ಬಸ್​: 7 ಪ್ರಯಾಣಿಕರು ಸಾವು

ಖಾಸಗಿ ಬಸ್ ಕಣಿವೆಗೆ ಬಿದ್ದು 7 ಪ್ರಯಾಣಿಕರು ಸಾವನ್ನಪ್ಪಿರುವಂತಹ ಘಟನೆ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 27ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಉತ್ತರಾಖಂಡ್‌: ಕಣಿವೆಗೆ ಬಿದ್ದ ಖಾಸಗಿ ಬಸ್​: 7 ಪ್ರಯಾಣಿಕರು ಸಾವು
ಕಣಿವೆಗೆ ಬಿದ್ದ ಖಾಸಗಿ ಬಸ್​
ಗಂಗಾಧರ​ ಬ. ಸಾಬೋಜಿ
|

Updated on:Aug 20, 2023 | 10:22 PM

Share

ಉತ್ತರಾಖಂಡ್‌, ಆಗಸ್ಟ್​ 20: ಖಾಸಗಿ ಬಸ್ (Private bus) ಕಣಿವೆಗೆ ಬಿದ್ದು 7 ಪ್ರಯಾಣಿಕರು ಸಾವನ್ನಪ್ಪಿರುವಂತಹ ಘಟನೆ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 35 ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಅವಘಡ ಸಂಭವಿಸಿದ್ದು, 27ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ, 35 ಪ್ರಯಾಣಿಕರಿದ್ದ ಖಾಸಗಿ ಬಸ್ ಗಂಗೋತ್ರಿಯಿಂದ ಉತ್ತರಕಾಶಿ ಕಡೆಗೆ ಹೋಗುತ್ತಿದ್ದಾಗ ಸಂಜೆ 4.05 ಕ್ಕೆ ಆಳವಾದ ಕಣಿವೆಗೆ ಬಿದ್ದಿದೆ ಎನ್ನಲಾಗುತ್ತಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಆಂಬುಲೆನ್ಸ್‌ಗಳು ಮತ್ತು ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಧಾವಿಸಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಅಪಘಾತಕ್ಕೆ ಕಾರಣ ಏನು?

ಬಸ್ ಚಾಲಕನ ನಿಯಂತ್ರಣ ತಪ್ಪಿರುವುದೆ ಈ ಭೀಕರ ಅಪಘಾತಕ್ಕೆ ಕಾರಣ ಎಂಬುವುದು ಪ್ರಾಥಮಿಕ ತನಿಖೆ ಮೂಲಕ ತಿಳಿದು ಬಂದಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಿಷ್ಟು

ದೆಹಲಿಯಲ್ಲಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ತರಕಾರಿ ಮಾರುಕಟ್ಟೆಯಲ್ಲಿ ಭಾರತದ UPI ವ್ಯವಸ್ಥೆ ಮೂಲಕ ಹಣ ಪಾವತಿಸಿದ ಜರ್ಮನಿ ಸಚಿವ

ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ವೈದ್ಯಕೀಯ ತಂಡಗಳು ಸದ್ಯ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಸಂದರ್ಭದಲ್ಲಿ ನೆರವು ನೀಡಲು ಡೆಹ್ರಾಡೂನ್‌ನಲ್ಲಿ ಹೆಲಿಕಾಪ್ಟರ್ ಅನ್ನು ಸಹ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಉತ್ತರಾಖಂಡವು ನಿರಂತರ ಮಳೆಯಿಂದ ತತ್ತರಿಸಿದ್ದು, ಹಲವೆಡೆ ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೂ ಒಳಗಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:09 pm, Sun, 20 August 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ