Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

| Updated By: ಸುಷ್ಮಾ ಚಕ್ರೆ

Updated on: Oct 19, 2021 | 8:26 PM

Uttarakhand Flood: ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಂದ ವೈಮಾನಿಕ ಸಮೀಕ್ಷೆ
Follow us on

ಉತ್ತರಾಖಂಡ್: ಉತ್ತರಾಖಂಡ್​​ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ ಸರ್ಕಾರದಿಂದ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ‌ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.

ಪ್ರವಾಹದಿಂದ ಮುಳುಗಡೆಯಾದ ಸ್ಥಳಗಳಿಗೆ ಇಂದು ಸಿಎಂ ಪುಷ್ಕರ್ ಸಿಂಗ್ ಧಾಮಿ ತೆರಳಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್​ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕುಮೋನ್ ಪ್ರಾಂತ್ಯದಲ್ಲಿ ಇಂದು ಮಳೆ ಮುಂದುವರಿದ ಪರಿಣಾಮ ಮನೆಗಳು ಕುಸಿದು ಬಿದ್ದಿವೆ. ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ನೈನಿತಾಲ್​ನಲ್ಲಿ ಇಂದು ಸಂಜೆ ಮತ್ತೆ ಐವರು ಕಾರ್ಮಿಕರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.

ಉತ್ತರಾಖಂಡ ರಾಜ್ಯದಲ್ಲಿ ಮಳೆ, ಭೂಕುಸಿತದಿಂದ 16 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಭೂಕುಸಿತ ಮತ್ತು ಪ್ರವಾಹದಿಂದ 5 ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ನೈನಿತಾಲ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಸಾವಿನ ಸಂಖ್ಯೆ ಏರುತ್ತಲೇ ಇದೆ. ಕಳೆದ ಮೂರು ದಿನಗಳಿಂದಲೂ ಸುರಿಯುತ್ತಿರುವ ಮಳೆ ಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ.

ಕೇಂದ್ರ ಸರ್ಕಾರದಿಂದ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇದರ ನಡುವೆ ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದ ಆಘಾತಕಾರಿ ವಿಡಿಯೋಗಳು ಟ್ವಿಟ್ಟರ್​ನಲ್ಲಿ ಹರಿದಾಡುತ್ತಿವೆ. ಉತ್ತರಾಖಂಡದ ಪ್ರವಾಹ ಸ್ಥಿತಿ ಗಂಭೀರವಾಗುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಾಮಿಯೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯವಿರುವ ಎಲ್ಲಾ ಸಹಾಯದ ಭರವಸೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಧಾಮಿ ಪ್ರಧಾನಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Uttarakhand Flood: ಉತ್ತರಾಖಂಡ ಪ್ರವಾಹದಿಂದ 16 ಜನ ಸಾವು; ಭೂಕುಸಿತದಿಂದ ದ್ವೀಪವಾದ ನೈನಿತಾಲ್

ಉತ್ತರಾಖಂಡ್​​ ಮಳೆಗೆ 5 ಮಂದಿ ಬಲಿ; ಸಿಎಂಗೆ ಕರೆ ಮಾಡಿ ಪರಿಸ್ಥಿತಿಯ ವರದಿ ಕೇಳಿದ ಪ್ರಧಾನಿ ಮೋದಿ