Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Cloudburst: ಉತ್ತರಾಖಂಡದಲ್ಲಿ ಮೇಘಸ್ಫೋಟ, 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ

ಉತ್ತರಾಖಂಡ(Uttarakhand)ದ ಪಿಥೋರ್​ಗಢದಲ್ಲಿ ಮೇಘಸ್ಫೋಟ(Clud burst)  ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ

Uttarakhand Cloudburst: ಉತ್ತರಾಖಂಡದಲ್ಲಿ ಮೇಘಸ್ಫೋಟ, 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ
ಉತ್ತರಾಖಂಡ ಮೇಘಸ್ಫೋಟImage Credit source: India Today
Follow us
ನಯನಾ ರಾಜೀವ್
|

Updated on: Jul 07, 2023 | 12:15 PM

ಉತ್ತರಾಖಂಡ(Uttarakhand)ದ ಪಿಥೋರ್​ಗಢದಲ್ಲಿ ಮೇಘಸ್ಫೋಟ(Clud burst)  ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಉತ್ತರಾಖಂಡದ ಧಾರ್ಚುಲಾದಲ್ಲಿ ದರ್ಮಾ ಕಣಿವೆಯ ಚಾಲ್ ಗ್ರಾಮದಲ್ಲಿ ಮೇಘಸ್ಫೋಟದಿಂದಾಗಿ ಪಾದಚಾರಿ ಸೇತುವೆ ಮತ್ತು ಟ್ರಾಲಿ ನಾಶವಾಗಿದೆ. ಗ್ರಾಮದಲ್ಲಿ 200ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ಆಡಳಿತವು ಸ್ಥಳಕ್ಕೆ ತೆರಳಿದೆ, ಆದರೆ ದೋಬಾತ್‌ನಲ್ಲಿ ರಸ್ತೆಯನ್ನು ಮುಚ್ಚಿರುವುದರಿಂದ, ರಕ್ಷಣೆಗೆ ತೆರಳುತ್ತಿರುವ ಪೊಲೀಸ್ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡವೂ ಸಂಕಷ್ಟಕ್ಕೆ ಸಿಲುಕಿದೆ.

ಬದರಿನಾಥದಲ್ಲಿ ಇಂದು ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಚೀಂಕಾ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಹಲವು ಪ್ರಯಾಣಿಕರು ಪರದಾಡುವಂತಾಯಿತು. ಸಂಚಾರ ಸ್ಥಗಿತಗೊಂಡಿದೆ.

ಮತ್ತಷ್ಟು ಓದಿ: Amarnath Yatra: ಕಾಶ್ಮೀರದಲ್ಲಿ ಭಾರೀ ಮಳೆ, ಅಮರನಾಥ ಯಾತ್ರೆ ಸ್ಥಗಿತ

ಮುಂದಿನ ದಿನಗಳಲ್ಲಿ ದೇಶದ ಏಳು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದರಿಂದ ಈ ಬಾರಿಯ ಭಾರೀ ಮಳೆಯು ಮುಂದಿನ ದಿನಗಳಲ್ಲಿ ಹೆಚ್ಚಿನ ತೊಂದರೆಯನ್ನು ತಂದೊಡ್ಡಬಹುದು ಎಂದು ಅಂದಾಜಿಸಲಾಗಿದೆ.

ಉತ್ತರಾಖಂಡದಲ್ಲಿ ಮುಂಗಾರು ಆರಂಭವಾದಾಗಿನಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯಾದ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಭೂಕುಸಿತಗಳು ಭಾರಿ ಸಮಸ್ಯೆಗಳನ್ನು ಉಂಟುಮಾಡುತ್ತಿವೆ. ರಸ್ತೆಗೆ ಅಪಾರ ಪ್ರಮಾಣದ ಅವಶೇಷಗಳು, ಕಲ್ಲುಗಳು ಬಿದ್ದಿದ್ದು, ರಸ್ತೆ ಸಂಪೂರ್ಣ ಬಂದ್ ಆಗಿದೆ.

ಮತ್ತಷ್ಟು ಓದಿ: Karnataka Rains: ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರು, ರೆಡ್ ಅಲರ್ಟ್​ ಘೋಷಣೆ

ಹಿಮಾಚಲ ಪ್ರದೇಶದಿಂದ ರಾಜಸ್ಥಾನ, ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಕೇರಳ, ಉತ್ತರಾಖಂಡದವರೆಗೆ ಮುಂಬರುವ ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದೆಹಲಿ-ಎನ್‌ಸಿಆರ್‌ನಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೇರಳ, ಕರ್ನಾಟಕದಲ್ಲೂ ಭಾರಿ ಮಳೆಯಾಗುತ್ತಿದೆ.

ನಗರದ ಪ್ರದೇಶಗಳಷ್ಟೇ ಅಲ್ಲದೆ ಗ್ರಾಮಿಣ ಪ್ರದೇಶಗಳಲ್ಲೂ ರಸ್ತೆಗಳು ತುಂಬಿ ತುಳುಕುತ್ತಿವೆ. ಕೇರಳದ ಇಡುಕ್ಕಿ, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೇರಳದ 11 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ