ಉತ್ತರಾಖಂಡದಲ್ಲಿ ಒಂದು ವರ್ಷದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣ

|

Updated on: Sep 13, 2024 | 8:56 AM

ಉತ್ತರಾಖಂಡದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಒಂದು ವರ್ಷದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣಗೊಂಡಿದೆ. ಕಳೆದ ಒಂದು ವರ್ಷದಲ್ಲಿ 23 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಈ ಸಂಖ್ಯೆಯು 2020ಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು.

ಉತ್ತರಾಖಂಡದಲ್ಲಿ ಒಂದು ವರ್ಷದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣ
ಅಪರಾಧ
Image Credit source: The Economic Times
Follow us on

ಉತ್ತರಾಖಂಡದಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾರಿ ಹೆಚ್ಚಳ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹಾಗೆಯೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳೂ ಹೆಚ್ಚಾಗಿದ್ದು, ಒಂದೇ ವರ್ಷದಲ್ಲಿ ಅತ್ಯಾಚಾರ ಪ್ರಕರಣಗಳು ದ್ವಿಗುಣಗೊಂಡಿವೆ.

ಕಳೆದ ಒಂದು ವರ್ಷದಲ್ಲಿ 23 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಈ ಸಂಖ್ಯೆಯು 2020ಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು. ಪೊಲೀಸ್ ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಕಾಳಜಿ ಎತ್ತಿ ತೋರಿಸಿದ್ದು, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿವೆ.

ಅತ್ಯಾಚಾರ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಗಳ ಮೂಲಕ ವಿಚಾರಣೆ ಮಾಡಬೇಕು ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು. ಇಂತಹ ಘೋರ ಅಪರಾಧಗಳನ್ನು ಎಸಗುವವರನ್ನು ಬಿಡಬಾರದು, ಆಗ ಮಾತ್ರ ನಾವು ಅಂತಹ ಅಪರಾಧಗಳಿಗೆ ಕಡಿವಾಣ ಹಾಕಬಹುದು ಎಂಬ ಬಲವಾದ ಸಂದೇಶವನ್ನು ಇದು ಸಮಾಜಕ್ಕೆ ರವಾನಿಸುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ಬೀನಾ ದೇವಿ ಹೇಳಿದ್ದಾರೆ.

ಮತ್ತಷ್ಟು ಓದಿ: ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವೈದ್ಯನ ಖಾಸಗಿ ಅಂಗವನ್ನೇ ಕತ್ತರಿಸಿದ ನರ್ಸ್​

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಸಿ) 2023ರ ವರದಿ ಪ್ರಕಾರ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಅಂಕಿಅಂಶಗಳು ಆಘಾತಕಾರಿಯಾಗಿದೆ. ಕಳೆದ ವರ್ಷದಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ 26% ಹೆಚ್ಚಳವಾಗಿದೆ, 905 ಅತ್ಯಾಚಾರ ಪ್ರಕರಣಗಳು ಮತ್ತು 778 ಅಪಹರಣ ಪ್ರಕರಣಗಳು ವರದಿಯಾಗಿವೆ.

ಅಲ್ಮೋರಾದ ಸಾಲ್ಟ್ ಏರಿಯಾದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಡೆಹ್ರಾಡೂನ್‌ನ ಐಎಸ್‌ಬಿಟಿಯಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರ, ರುದ್ರಪುರದಲ್ಲಿ ಮಹಿಳಾ ನರ್ಸ್‌ನ ಕ್ರೂರ ಅತ್ಯಾಚಾರ ಮತ್ತು ಹತ್ಯೆ, ಮತ್ತು ಹರಿದ್ವಾರದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ವಿರುದ್ಧದ ಘೋರ ಅಪರಾಧಗಳು ಆತಂಕ ಮೂಡಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:55 am, Fri, 13 September 24