ಉತ್ತರಾಖಂಡ್​: ಗುರುದ್ವಾರದೊಳಗೆ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ

ಉತ್ತರಾಖಂಡದ ನಾನಕ್‌ಮಟ್ಟಾ ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುರುವಾರ ಮುಂಜಾನೆ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

ಪೊಲೀಸ್​Image Credit source: India Today
Follow us
ನಯನಾ ರಾಜೀವ್
|

Updated on: Mar 28, 2024 | 11:40 AM

ಉತ್ತರಾಖಂಡದ ನಾನಕ್‌ಮಟ್ಟಾ ಗುರುದ್ವಾರದೊಳಗೆ ಸಿಬ್ಬಂದಿಯನ್ನು ಗುರುವಾರ ಮುಂಜಾನೆ ಇಬ್ಬರು ಮುಸುಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ.

ಘಟನೆಯನ್ನು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕರು ದೃಢಪಡಿಸಿದ್ದು, ಇಂದು ಬೆಳಗ್ಗೆ 7 ಗಂಟೆಗೆ ಕೊಲೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮುಸುಕುಧಾರಿಗಳಾದ ಇಬ್ಬರು ದುಷ್ಕರ್ಮಿಗಳು ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್‌ಗೆ ಗುಂಡು ಹಾರಿಸಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಅವರನ್ನು ಕೂಡಲೇ ಖತಿಮಾದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಬೆಂಗಳೂರಿನ ಪ್ರತಿಷ್ಠಿತ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ; ತನಿಖೆ ನಡೆಸಿದಾಗ ಪೊಲೀಸರೇ ಶಾಕ್!

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ತನಿಖೆಗಾಗಿ, ಪೊಲೀಸ್ ಪ್ರಧಾನ ಕಛೇರಿಯು ಎಸ್‌ಐಟಿಯನ್ನು ರಚಿಸಿದೆ. ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಇದನ್ನು ತಮ್ಮ ಪ್ರಮುಖ ಆದ್ಯತೆಯಾಗಿ ಇರಿಸಿಕೊಳ್ಳಲು ಮತ್ತು ಎಲ್ಲಾ ಕೋನಗಳನ್ನು ಸೂಕ್ಷ್ಮವಾಗಿ ತನಿಖೆ ಮಾಡಲು ತಿಳಿಸಲಾಗಿದೆ.

ಹಂತಕರ ದೃಶ್ಯಾವಲಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ, ಒಂದು ಗುಂಡು ಅವರ ಹೊಟ್ಟೆಯ ಮೂಲಕ ಹಾದು ಹೋಗಿತ್ತು. ಕೊಲೆಗಾರರು ಪೇಟ ಧರಿಸಿದ್ದರು. ಬೈಕ್ ಹಿಂದೆ ನೀಲಿ ಬಣ್ಣದ ಬ್ಯಾಗ್ ಕಟ್ಟಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್