Uttarakhand: ಅಲಕಾನಂದ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ, 15ಕ್ಕೂ ಹೆಚ್ಚು ಸಾವು, ಹಲವರಿಗೆ ಗಾಯ

ವಿದ್ಯುತ್​ ಪ್ರವಹಿಸಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್​ನ ಚಮೇಲಿಯ ಅಲಕಾನಂದ ನದಿ ಬಳಿ ನಡೆದಿದೆ.

Uttarakhand: ಅಲಕಾನಂದ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ, 15ಕ್ಕೂ ಹೆಚ್ಚು ಸಾವು, ಹಲವರಿಗೆ ಗಾಯ
ಅಲಕಾನಂದ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 19, 2023 | 2:17 PM

ಚಮೇಲಿಯ, ಜು.19: ವಿದ್ಯುತ್​ ಪ್ರವಹಿಸಿ 15ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್​(Uttarakhand) ಚಮೇಲಿಯ ಅಲಕಾನಂದ ನದಿ ಬಳಿ ನಡೆದಿದೆ. ನಮಾಮಿ ಗಂಗೆ ಯೋಜನೆಯ ಕಾಮಗಾರಿ ವೇಳೆ ಈ ದುರಂತ ನಡೆದಿದೆ ಎಂದು ಹೇಳಲಾಗಿದೆ. ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡಿದೆ, ಹಲವರು ಜನರು ಇಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಮೋಲಿ ಎಸ್ಪಿ ಪರಮೇಂದ್ರ ದೋವಲ್ ಮಾತನಾಡಿ, ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಲಕಾನಂದದ ನೀರಿನ ಮಟ್ಟ ಏರಿಕೆಯಾಗಿದೆ. ಅಲಕಾನಂದದ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಪೌರಿ ಜಿಲ್ಲೆಯ ಶ್ರೀನಗರದಲ್ಲಿರುವ ಜಿವಿಕೆ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನಿಂದ ಸುಮಾರು 3,000 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಇನ್ನೂ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ಪೌರಿ, ತೆಹ್ರಿ, ಹರಿದ್ವಾರ ಮತ್ತು ಡೆಹ್ರಾಡೂನ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ನೀರು ಬಿಡುವುದರಿಂದ ಆಯಾ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. ಹರಿದ್ವಾರ, ಋಷಿಕೇಶ ಮತ್ತು ಇತರ ಸ್ಥಳಗಳಲ್ಲಿ, ಜನರು ನದಿ ದಡದಿಂದ ಹೋಗದಂತೆ ಮತ್ತು ಅವರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:42 pm, Wed, 19 July 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ