ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಇನ್ನೂ 2 ರಿಂದ 15 ದಿನಗಳು ತಗುಲಬಹುದು ಎಂದ ಅಧಿಕಾರಿಗಳು

ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು. ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ 15ದಿನವರೆಗೂ ಹಿಡಿಯ ಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಇನ್ನೂ 2 ರಿಂದ 15 ದಿನಗಳು ತಗುಲಬಹುದು ಎಂದ ಅಧಿಕಾರಿಗಳು
ಸುರಂಗImage Credit source: NDTV
Follow us
ನಯನಾ ರಾಜೀವ್
|

Updated on: Nov 22, 2023 | 9:45 AM

ಉತ್ತರಕಾಶಿ(Uttarkashi)ಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ(Tunnel) ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು. ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ 15ದಿನವರೆಗೂ ಹಿಡಿಯಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನವೆಂಬರ್ 12ರಂದು ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದಿತ್ತು, 41 ಮಂದಿ ಕಾರ್ಮಿಕರು ಇದೀಗ ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಮೆರಿಕ ನಿರ್ಮಿತ ಆಗರ್ ಡ್ರಿಲ್ಲಿಂಗ್ ಯಂತ್ರವು ಇದೀಗ ಉತ್ತಮ ಆಯ್ಕೆಯಾಗಿದೆ ಮತ್ತು 2.5 ದಿನಗಳಲ್ಲಿ ಕಾರ್ಮಿಕರು ಹೊರಬರಬಹುದು.

ಕಳೆದ ಶುಕ್ರವಾರ ಮಧ್ಯಾಹ್ನ ಆಗರ್ ಯಂತ್ರವು ಗಟ್ಟಿಯಾದ ಬಂಡೆಯೊಂದರ ಬಳಿ ಬಂದಿದ್ದು, ಕಂಪನ ಸಂಭವಿಸಿತ್ತು ಪ್ರಚೋದಿಸಿತು, ಸುರಕ್ಷತೆಯ ಕಾರಣದಿಂದ ಕಾರ್ಯಾಚರಣೆಯನ್ನು ತಡೆಹಿಡಿಯಲಾಗಿತ್ತು.

ಐದು ಇತರ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ, ಆದರೆ ಅವು 12-15 ದಿನಗಳವರೆಗೆ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6 ಇಂಚಿನ ಪೈಪ್ ಮೂಲಕ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಚಪಾತಿ, ವೆಜ್​ ಪಲಾವ್, ಮಟರ್​ ಪನೀರ್​ನಂತಹ ಬೇಯಿಸಿದ ಆಹಾರ ಪದಾರ್ಥಗಳನ್ನು ರವಾನಿಸಲಾಗುತ್ತಿದೆ.

ಮತ್ತಷ್ಟು ಓದಿ: Uttarkashi: ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಮೊದಲ ಫೋಟೊ ಬಿಡುಗಡೆ

ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಅಂಶು ಮನೀಶ್ ಮಾತನಾಡಿ, 6 ಇಂಚಿನ ಪೈಪ್​ನಲ್ಲಿ ಸಿಲಿಂಡರ್ ಆಕಾರದ ಪ್ಲಾಸ್ಟಿಕ್​ ಬಾಟಲಿಗಳಲ್ಲಿ ಖಿಚಡಿ ಮತ್ತು ದಾಲ್​ ಅನ್ನು ಪೂರೈಸಲು ಪ್ರಯತ್ನಿಸಲಾಯಿತು ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ ಇತರೆ ಪದಾರ್ಥಗಳು ಸೇರಿದಂತೆ ಕಿತ್ತಳೆ, ಬಾಳೆಹಣ್ಣು ಮತ್ತು ಅಗತ್ಯ ಔಷಧಗಳನ್ನು ಪೂರೈಸಲಾಯಿತು.

ಸದ್ಯ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ , ಎಸ್​ಡಿಆರ್​ಎಫ್, ಐಟಿಬಿಪಿ, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕಾರ್ಮಿಕರ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ