ಉತ್ತರಕಾಶಿ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆ ಪ್ರಕ್ರಿಯೆ ಇನ್ನೂ 2-3 ದಿನಗಳ ಕಾಲ ನಡೆಯುವ ಸಾಧ್ಯತೆ
ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿತಗೊಂಡಿದ್ದು, 40 ಕಾರ್ಮಿಕರು ಒಳಗೆ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಶುಕ್ರವಾರ ಆರನೇ ದಿನಕ್ಕೆ ಕಾಲಿಟ್ಟಿದ್ದು, ರ್ ಧಾಮ್ ಮಾರ್ಗದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿರುವ 40 ಕಾರ್ಮಿಕರ ಕಾಯುವಿಕೆ ಮುಂದುವರೆದಿದೆ. ಮಂಗಳವಾರ ಭೂ ಕುಸಿತ ಉಂಟಾದ ಕಾರಣ ರಕ್ಷಣಾ ಕಾರ್ಯ ವಿಳಂಬವಾಗಿತ್ತು, ಇದೀಗ ದೆಹಲಿಯಿಂದ ಹೊಸ ಯಂತ್ರವನ್ನು ತರಿಸಿಕೊಳ್ಳಲಾಗಿದ್ದು, ಕಾರ್ಮಿಕರ ರಕ್ಷಣೆಗೆ ಇನ್ನೂ 2-3 ದಿನಗಳು ತಗುಲಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಮಿಕರು ಸುರಕ್ಷಿತವಾಗಿದ್ದು, ಅವರಿಗೆ ಪೈಪ್‌ಗಳ ಮೂಲಕ ಆಮ್ಲಜನಕ, ವಿದ್ಯುತ್, ಔಷಧಗಳು, ಆಹಾರ ಪದಾರ್ಥಗಳು ಮತ್ತು ನೀರನ್ನು ನಿರಂತರವಾಗಿ ಸರಬರಾಜು ಮಾಡಲಾಗುತ್ತಿದೆ.
ನವೆಂಬರ್ 12 ರಿಂದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ಆದಷ್ಟು ಬೇಗ ಸುರಕ್ಷಿತವಾಗಿ ಸ್ಥಳಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಚಿವ ವಿಕೆ ಸಿಂಗ್ ಹೇಳಿದ್ದಾರೆ. ಸಿಕ್ಕಿಬಿದ್ದ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದೇನೆ ಅವರು ಸುರಕ್ಷಿತವಾಗಿದ್ದಾರೆ ಎಂದರು.
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲಾ ಸುರಂಗ ಮಾರ್ಗಗಳನ್ನು ಪರಿಶೀಲಿಸಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. 12,000 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಭಾಗವಾಗಿ ಬೆಟ್ಟದ ರಾಜ್ಯದಲ್ಲಿ ಹಲವಾರು ಸುರಂಗಗಳನ್ನು ನಿರ್ಮಿಸಲಾಗುವುದು.
ಮತ್ತಷ್ಟು ಓದಿ: ಉತ್ತರಕಾಶಿ ಸುರಂಗ ಕುಸಿದು 5 ದಿನವಾದ್ರೂ ಕಾರ್ಮಿಕರ ರಕ್ಷಣೆ ಸಾಧ್ಯವಾಗಿಲ್ಲ, ಆಹಾರ, ಔಷಧಗಳ ಪೂರೈಕೆ
ದೆಹಲಿಯಿಂದ ತರಿಸಿದ ಡ್ರಿಲ್ಲಿಂಗ್ ಯಂತ್ರವು ಕುಸಿದ ಸುರಂಗದ ಅವಶೇಷಗಳ ಮೂಲಕ ಕೊರೆಯಲಾರಂಭಿಸಿತು. ಆರು ಹಾಸಿಗೆಗಳ ತಾತ್ಕಾಲಿಕ ಆರೋಗ್ಯ ಸೌಲಭ್ಯವನ್ನು ಸ್ಥಾಪಿಸಲಾಗಿದೆ ಮತ್ತು ಸುರಂಗದ ಹೊರಗೆ ತಜ್ಞ ವೈದ್ಯರೊಂದಿಗೆ 10 ಆಂಬ್ಯುಲೆನ್ಸ್‌ಗಳನ್ನು ಇರಿಸಲಾಗಿದ್ದು, ಸಿಕ್ಕಿಬಿದ್ದ ಕಾರ್ಮಿಕರಿಗೆ ಸ್ಥಳಾಂತರಿಸಿದ ನಂತರ ತಕ್ಷಣದ ವೈದ್ಯಕೀಯ ಆರೈಕೆಯನ್ನು ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ