ಉತ್ತರ ಪ್ರದೇಶ: ಢಾಬಾಗೆ ನುಗ್ಗಿದ ಟ್ರಕ್, ಮೂವರು ಸಾವು, ಮೂರು ಮಂದಿಗೆ ಗಂಭೀರ ಗಾಯ
ಢಾಬಾಗೆ ಟ್ರಕ್ ನುಗ್ಗಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಮತ್ತು ಮೃತರ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಸುದ್ದಿಗಾರರಿಗೆ ತಿಳಿಸಿದರು.

ಮೃತಪಟ್ಟ ಮೂವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಮತ್ತು ಆತ ಮದ್ಯದ ಅಮಲಿನಲ್ಲಿದ್ದ ಎಂಬುದು ತಿಳಿದುಬಂದಿದೆ ಎಂದು ಇಟಾವಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಸಂಜಯ್ ಕುಮಾರ್ ವರ್ಮಾ ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಶವಗಳನ್ನು ಅವಶೇಷಗಳಡಿಯಿಂದ ಹೊರತೆಗೆಯಲು ಸುಮಾರು ಎರಡು ಗಂಟೆಗಳು ಬೇಕಾಯಿತು ಎಂದು ರೈ ಹೇಳಿದ್ದಾರೆ. ಬುಲ್ಡೋಜರ್ನಿಂದ ಢಾಬಾದ ಇಟ್ಟಿಗೆಗಳು ಹಾಗೂ ಇತರೆ ವಸ್ತುಗಳನ್ನು ತೆರವುಗೊಳಿಸಲಾಗಿದೆ.
ಮತ್ತಷ್ಟು ಓದಿ: ನಾಗ್ಪುರದಲ್ಲಿ ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ, 6 ಮಂದಿ ಸಾವು
ಟ್ರಕ್ ಹೋಗುತ್ತಿದ್ದ ಲೇನ್ನಿಂದ ಬೇರೆಡೆಗೆ ತಿರುಗಿ ಢಾಬಾಗೆ ಡಿಕ್ಕಿ ಹೊಡೆದಿರುವ ಸಾಧ್ಯತೆ ಇದೆ. ಟ್ರಕ್ ಜಾರ್ಖಂಡ್ ನಂಬರ್ ಪ್ಲೇಟ್ ಹೊಂದಿದ್ದು, ಅಪಘಾತದ ಸ್ಥಳದಿಂದ ಅದನ್ನು ತೆಗೆದುಹಾಕಲಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ