AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ ಎಂದು DCGI ತಿಳಿಸಿದೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ
Lakshmi Hegde
| Edited By: |

Updated on:Jan 03, 2021 | 2:48 PM

Share

ನವದೆಹಲಿ: ಕೊರೊನಾ ಲಸಿಕೆ ಯಾವಾಗ ಬಳಕೆಗೆ ಸಿಗಬಹುದು ಎಂಬ ನಿರೀಕ್ಷೆಗೆ ಅಂತೂ ತೆರೆ ಬಿದ್ದಿದೆ. ಸೀರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ (ಆಕ್ಸ್​ಫರ್ಡ್ ವಿವಿ)​ ಕೊವಿಶೀಲ್ಡ್​ ಮತ್ತು ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಗಳನ್ನು ತುರ್ತು ಪರಿಸ್ಥಿತಿಯಲ್ಲಿ ಬಳಕೆ ಮಾಡಲು ಡ್ರಗ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DCGI-ಭಾರತೀಯ ಪ್ರಧಾನ ಔಷಧ ನಿಯಂತ್ರಣ ಇಲಾಖೆ) ಇಂದು ಅಧಿಕೃತವಾಗಿ ಅನುಮೋದನೆ ನೀಡಿದೆ.

DCGI ಅಧ್ಯಕ್ಷ ವಿ.ಜಿ. ಸೋಮಾನಿ ಇಂದು, ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. ಇವೆರಡೂ ಲಸಿಕೆ ತಯಾರಿಕಾ ಸಂಸ್ಥೆಗಳು ತಮ್ಮ ವ್ಯಾಕ್ಸಿನ್​ನ ಕ್ಲಿನಿಕಲ್​ ಪ್ರಯೋಗದ ಸಮಗ್ರ ಮಾಹಿತಿಯನ್ನೂ ಸಲ್ಲಿಸಿದ್ದಾರೆ. ಎರಡೂ ಕಂಪನಿಗಳ ಲಸಿಕೆಗಳ ತುರ್ತು ನಿರ್ಬಂಧಿತ ಬಳಕೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್ ಲಸಿಕೆಗಳು ಶೇ.100ರಷ್ಟು ಸುರಕ್ಷಿತವಾಗಿವೆ. ಅದರ ಸುರಕ್ಷತೆ ಬಗ್ಗೆ ಸ್ವಲ್ಪ ಅನುಮಾನ ಇದ್ದಿದ್ದರೂ ನಾವು ಅನುಮೋದನೆ ನೀಡುತ್ತಿರಲಿಲ್ಲ. ಇನ್ನು ಸಣ್ಣ ಜ್ವರ, ಮೈಕೈ ನೋವು ಮತ್ತು ಅಲರ್ಜಿಗಳು ಎಲ್ಲ ರೀತಿ ಲಸಿಕೆಗಳ ಸಾಮಾನ್ಯ ಅಡ್ಡಪರಿಣಾಮಗಳು. ಈ ಬಗ್ಗೆ ಯಾರೂ ಹೆದರುವುದು ಬೇಡ ಎಂದು ಹೇಳಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್ ಲೈವ್ ಬ್ಲಾಗ್

Published On - 12:14 pm, Sun, 3 January 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ