AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ವಡೋದರದ ಮಕರಪುರ ಜಿಐಡಿಸಿ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Vadodara Blast: ವಡೋದರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 4 ಸಾವು, 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ
ವಡೋದರ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ
TV9 Web
| Edited By: |

Updated on: Dec 24, 2021 | 1:52 PM

Share

ವಡೋದರ: ಗುಜರಾತ್‌ನ ವಡೋದರ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ವಡೋದರ ನಗರದ ಮಕರಪುರ ಜಿಐಡಿಸಿ [ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ] ಪ್ರದೇಶದಲ್ಲಿರುವ ಕ್ಯಾಂಟನ್ ಪ್ರಯೋಗಾಲಯದಲ್ಲಿ ಸ್ಫೋಟ ಸಂಭವಿಸಿದೆ.

ವಡೋದರದ ಮಕರಪುರ ಜಿಐಡಿಸಿ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಇದರ ತೀವ್ರತೆ 3 ಕಿ.ಮೀ ದೂರದವರೆಗೂ ವ್ಯಾಪಿಸಿದ್ದು, ಗಾಜಿನ ಕಿಟಕಿಗಳು ಒಡೆದು ಹೋಗಿವೆ. ಕಾರ್ಖಾನೆಯು ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ಹಿನ್ನೆಲೆಯಲ್ಲಿ ವಡ್ಸರ್ ರೈಲ್ವೇ ಮೇಲ್ಸೇತುವೆಯ ಮೇಲಿನ ಸಂಚಾರವನ್ನು ಸಹ ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ಈ ಘಟನೆಗೆ ನಿಖರವಾದ ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯಲ್ಲಿ ಸಿಲಿಂಡರ್ ಸ್ಫೋಟ; ಯಾವುದೇ ಪ್ರಾಣಾಪಾಯವಾಗಿಲ್ಲ- ಘಟನೆಯ ವಿಡಿಯೋ ಇಲ್ಲಿದೆ

Punjab: ಲುಧಿಯಾನಾ ಕೋರ್ಟ್​ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?