ವಡೋದರ: ಗುಜರಾತ್‌ನ ವಡೋದರ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ವಡೋದರ ನಗರದ ಮಕರಪುರ ಜಿಐಡಿಸಿ [ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮ] ಪ್ರದೇಶದಲ್ಲಿರುವ ಕ್ಯಾಂಟನ್ ಪ್ರಯೋಗಾಲಯದಲ್ಲಿ ಸ್ಫೋಟ ಸಂಭವಿಸಿದೆ.
ವಡೋದರದ ಮಕರಪುರ ಜಿಐಡಿಸಿ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಇದರ ತೀವ್ರತೆ 3 ಕಿ.ಮೀ ದೂರದವರೆಗೂ ವ್ಯಾಪಿಸಿದ್ದು, ಗಾಜಿನ ಕಿಟಕಿಗಳು ಒಡೆದು ಹೋಗಿವೆ. ಕಾರ್ಖಾನೆಯು ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಫೋಟದ ಹಿನ್ನೆಲೆಯಲ್ಲಿ ವಡ್ಸರ್ ರೈಲ್ವೇ ಮೇಲ್ಸೇತುವೆಯ ಮೇಲಿನ ಸಂಚಾರವನ್ನು ಸಹ ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ಈ ಘಟನೆಗೆ ನಿಖರವಾದ ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯಲ್ಲಿ ಸಿಲಿಂಡರ್ ಸ್ಫೋಟ; ಯಾವುದೇ ಪ್ರಾಣಾಪಾಯವಾಗಿಲ್ಲ- ಘಟನೆಯ ವಿಡಿಯೋ ಇಲ್ಲಿದೆ
Punjab: ಲುಧಿಯಾನಾ ಕೋರ್ಟ್ ಎರಡನೇ ಮಹಡಿಯಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ