ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​

ಗೃಹ ಸಚಿವ ಅಮಿತ್​ ಶಾ ಸೇರಿ, ಹಲವು ಗಣ್ಯರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಅವರು ಕತ್ರಾದಲ್ಲಿರುವ ನರೈನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್​ ಗವರ್ನರ್​
ವೈಷ್ಣೋ ದೇವಿ ದೇಗುಲ ಆವರಣದಲ್ಲಿಂದು ಕಾಲ್ತುಳಿತ
Follow us
TV9 Web
| Updated By: Lakshmi Hegde

Updated on:Jan 01, 2022 | 3:32 PM

ಇತಿಹಾಸ ಪ್ರಸಿದ್ಧ, ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲ(Vaishno Devi Temple)ದಲ್ಲಿ ಇಂದು ಬೆಳಗ್ಗೆ ಕಾಲ್ತುಳಿತ ಉಂಟಾಗಿ 12 ಭಕ್ತರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ದೇಗುಲದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು, ಇತರ ರಕ್ಷಣಾ ಪಡೆಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ. ಇಂದು ಬೆಳಗ್ಗೆ ಸಾವಿರಾರು ಭಕ್ತರು ದೇಗುಲದಲ್ಲಿ ನೆರೆದಿದ್ದರು. ದೇವರ ದರ್ಶನಕ್ಕಾಗಿ ನಾ ಮುಂದು-ತಾ ಮುಂದು ಎಂದು ಮುನ್ನುಗ್ಗಲು ಯತ್ನಿಸಿದಾಗಿ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದಕ್ಕೆ ಸಂಬಂಧಪಟ್ಟ ಎರಡು ವಿಡಿಯೋಗಳೂ ವೈರಲ್ ಆಗುತ್ತಿವೆ. 

ಉನ್ನತ ಮಟ್ಟದ ತನಿಖೆಗೆ ಆದೇಶ ವೈಷ್ಣೋದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್​ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದರ ತನಿಖೆ ಮಾಡಲು ಜಮ್ಮುವಿನ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ವಿಚಾರಣಾ ಸಮಿತಿ ರಚಿಸಲಾಗಿದ್ದು, ಎಡಿಜಿಪಿ, ಜಮ್ಮು ಮತ್ತು ವಿಭಾಗೀಯ ಆಯುಕ್ತರು ಇರಲಿದ್ದಾರೆ. ಘಟನೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಲೆಫ್ಟಿನಂಟ್ ಗವರ್ನರ್​, ವೈಷ್ಣೋದೇವಿ ದೇಗುಲದಲ್ಲಿ ನಡೆದ ದುರಂತದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮಾತನಾಡಿದ್ದೇನೆ. ನಮ್ಮ ಆಡಳಿತದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ನೀಡಲಾಗುತ್ತದೆ. ಹಾಗೇ, ಗಾಯಗೊಂಡವರ ಚಿಕಿತ್ಸೆಗೆ 2 ಲಕ್ಷ ರೂ.ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್​, ಗೃಹ ಸಚಿವ ಅಮಿತ್​ ಶಾ ಸೇರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ಹಲವು ಗಣ್ಯರು ಈ ದುರಂತದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಅವರು ಕತ್ರಾದಲ್ಲಿರುವ ನರೈನಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ವೈಷ್ಣೋದೇವಿ ದೇಗುಲ ದುರಂತದಲ್ಲಿ ಗಾಯಗೊಂಡವರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನೆಲ್ಲ ಮಾತನಾಡಿಸಿದ್ದಾರೆ. ಈ ಆಸ್ಪತ್ರೆಗೆ ದಾಖಲಾಗಿರುವವರ ಆರೋಗ್ಯ ಸ್ಥಿರವಾಗಿದೆ. ಆರು ಮಂದಿ ಐಸಿಯುನಲ್ಲಿ ದಾಖಲಾಗಿದ್ದಾರೆ. ಇಬ್ಬರು ಈಗಾಗಲೇ ಡಿಸ್​ಚಾರ್ಜ್ ಆಗಿದ್ದಾರೆ. 4 ಮಂದಿ ಜನರಲ್​ ವಾರ್ಡ್​​ನಲ್ಲಿ ಇದ್ದಾರೆ. ಅವರು ನಾಳೆ-ನಾಡಿದ್ದು ಅಷ್ಟರಲ್ಲಿ ಡಿಸ್​ಚಾರ್ಜ್​ ಆಗಬಹುದು ಎಂದು ತಿಳಿಸಿದ್ದಾರೆ.  ಹಾಗೇ, ಮುಂದಿನ ದಿನಗಳಲ್ಲಿ ಇಂಥ ಅವಘಡಗಳು ಆಗದಂತೆ ತಡೆಯಲು, ಕೆಲವು ತಾಂತ್ರಿಕ ಕ್ರಮಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದೂ ಹೇಳಿದ್ದಾರೆ. ಹಾಗೇ, ಮೃತಪಟ್ಟವರು ಮತ್ತು ಗಾಯಗೊಂಡವರ ಹೆಸರಿನ ಪಟ್ಟಿಯನ್ನೂ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Vaishno Devi Temple Stampede: ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತ, 12 ಭಕ್ತರ ಸಾವು

Published On - 3:22 pm, Sat, 1 January 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್